ಬೀದರ್: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ವಿವಿ ವಿಶ್ರಾಂತ ಕುಲಪತಿ, ನಿವೃತ್ತ ಕಂಟ್ರೋಲರ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ, ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ, ಬೆಂಗಳೂರು ಎಂಟರ್ ಪ್ರೈಸೆಸ್ ಮಾಲೀಕರಾದ ಬೊಪ್ಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.

2017-18ರಲ್ಲಿ ₹45 ಕೋಟಿಗೂ ಅಧಿಕ ಹಣ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿರುವ ಆರೋಪವಿದೆ. ಈ ಅವಧಿಯಲ್ಲಿ ನಾರಾಯಣಸ್ವಾಮಿ ಕುಲಪತಿ, ಕೆ.ಎಲ್.ಸುರೇಶ್ ಕಂಟ್ರೋಲರ್ ಆಗಿದ್ದರು. ವಿವಿ ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ ಎಂಟರ್ ಪ್ರೈಸೆಸ್ ಜೊತೆಯಲ್ಲಿ ಸೇರಿಕೊಂಡು ಅಕ್ರಮ ಎಸಗಿರುವ ಆರೋಪವಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ಮಂಗಳವಾರ 'ಪ್ರಜಾವಾಣಿ'ಗೆ ತಿಳಿಸಿವೆ.

ಪ್ರಕರಣ ಸಂಬಂಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ಸಕ್ರಿಯವಾದ ಲೋಕಾಯುಕ್ತ ಪೊಲೀಸರು ಕೆಲವರನ್ನು ಬೀದರ್ ಹಾಗೂ ಕೆಲ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಬೀದರ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ.ಎಸ್.ಸುಬ್ರಹ್ಮಣ್ಯಶ್ವರರಾವ್, ಎಸ್ಪಿ ಗಳಾದ ಬದ್ರಿನಾಥ, ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ, ಸಂತೋಷ ರಾಠೋಡ್ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.