ಬುಧವಾರ, ಮಾರ್ಚ್ 3, 2021
22 °C

ಅಪಘಾತ: ವಿಎಚ್‌ಪಿ ಸಂಪರ್ಕ ಪ್ರಮುಖ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ (ಬೀದರ್‌ ಜಿಲ್ಲೆ): ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ಉತ್ತರ ಪ್ರಾಂತದ ಸಂಪರ್ಕ ಪ್ರಮುಖ, ಸ್ಥಳೀಯ ನಿವಾಸಿ ಸುಧಾಕರ ದೇಶಪಾಂಡೆ (65) ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಸೋಮವಾರ ಬೆಳಿಗ್ಗೆ ಇಲ್ಲಿಯ ಖಡಕೇಶ್ವರ ವಿದ್ಯಾಮಂದಿರದ ಆವರಣ ದಲ್ಲಿ ಪಾರ್ಥಿವ ಶರೀರವನ್ನು ಸಾರ್ವ ಜನಿಕ ದರ್ಶನಕ್ಕೆ ಇಡಲಾಗುತ್ತದೆ. ಬೆಳಿಗ್ಗೆ 9 ಗಂಟೆಗೆ ಬ್ರಾಹ್ಮಣ ವಿಧಿ ವಿಧಾನ ಪ್ರಕಾರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುಧಾಕರ ಅವರ ಅತ್ತಿಗೆ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಅಸ್ಥಿ ವಿಸರ್ಜನೆಗೆ ಸಹೋದರನ ಮಗನೊಂದಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಭಾಲ್ಕಿ ತಾಲ್ಲೂಕಿನ ಇಂಚೂರ್ ಬಳಿ ಬಸ್‌ ಹಾಗೂ ದ್ವಿಚಕ್ರ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿ ಸುಧಾಕರ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಸಹೋದರನ ಪುತ್ರನ ಕಾಲು ಮುರಿದಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು