ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕೃಷಿ ಮಾರಾಟ ಮಂಡಳಿ: ವಿಜಯಕುಮಾರ ಆನಂದೆ ಅವಿರೋಧ ಆಯ್ಕೆ ಸಾಧ್ಯತೆ

Last Updated 22 ಸೆಪ್ಟೆಂಬರ್ 2021, 15:06 IST
ಅಕ್ಷರ ಗಾತ್ರ

ಬೀದರ್: ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ತೆರವಾದ ಸದಸ್ಯ ಸ್ಥಾನಕ್ಕೆ ಜಿಲ್ಲೆಯಿಂದ ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ವಿಜಯಕುಮಾರ ಆನಂದೆ ಅವರ ಅವಿರೋಧ ಆಯ್ಕೆ ಖಚಿತವಾಗಿದೆ.

ಸದಸ್ಯ ಸ್ಥಾನಕ್ಕೆ ವಿಜಯಕುಮಾರ ಆನಂದೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಸ್ಥಾನದ ಚುನಾವಣೆಯಲ್ಲಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಅಧ್ಯಕ್ಷರಿಗೆ ಮಾತ್ರ ಮತ ಹಕ್ಕು ಇದೆ. ಬಸವಕಲ್ಯಾಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತಹಶೀಲ್ದಾರ್ ಆಡಳಿತಾಧಿಕಾರಿ ಆಗಿದ್ದಾರೆ. ಬೀದರ್, ಭಾಲ್ಕಿ, ಹುಮನಾಬಾದ್ ಹಾಗೂ ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ಮಾತ್ರ ಮತಾಧಿಕಾರ ಹೊಂದಿದ್ದಾರೆ.

ಸೆ. 24 ರಂದು ಸದಸ್ಯ ಸ್ಥಾನದ ಚುನಾವಣೆಯ ನಾಮಪತ್ರ ಪರಿಶೀಲನೆ, ಸೆ. 27 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಸೆ. 30 ಮತದಾನದ ದಿನವಾಗಿದೆ. ಮತದಾನ ದಿನದಂದೇ ಸದಸ್ಯರ ಆಯ್ಕೆಯ ಅಧಿಕೃತ ಘೋಷಣೆ ಆಗಲಿದೆ. ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ತುಳಸಿರಾಮ ಲಾಖೆ ಚುನಾವಣಾಧಿಕಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT