ಶನಿವಾರ, ಜೂನ್ 19, 2021
26 °C

ಲಾಕ್‍ಡೌನ್ ನಿಯಮ ಉಲ್ಲಂಘನೆ: 1,345 ಜನರಿಗೆ ₹1.34 ಲಕ್ಷ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕೊರೊನಾ ಸೋಂಕು ತಡೆಯಲು ಸರ್ಕಾರ ಜಾರಿಗೆ ತಂದ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ 1,345 ಜನರಿಗೆ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ತಿಳಿಸಿದ್ದಾರೆ.

‘ವಿನಾ ಕಾರಣ ಮಾಸ್ಕ್ ಧರಿಸದೆ ರಸ್ತೆಗೆ ಬಂದ ಜನರನ್ನು ಹಿಡಿದು ದಂಡ ಹಾಕುವ ಪ್ರಕ್ರಿಯೆ ಜಾರಿಯಲ್ಲಿದೆ. ಈಗಾಗಲೇ ಇಂಥಹ 1,345 ಜನರಿಂದ ₹1.34 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಅನವಶ್ಯಕವಾಗಿ ಓಡಾಡುವ 60 ವಾಹನಗಳನ್ನು ಜಪ್ತಿ ಮಾಡಿಕೊಂಡು ಆ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಹೇಳಿದ್ದಾರೆ.

‘ಜಿಲ್ಲೆಯಲ್ಲಿ ಇದೇ 24ರ ವರೆಗೆ ಲಾಕ್‍ಡೌನ್ ಜಾರಿ ಇರುವುದರಿಂದ ಸಾರ್ವಜನಿಕರು ಮನೆಯಲ್ಲೇ ಉಳಿದು ಸಹಕರಿಸಬೇಕು. ಅವಶ್ಯ ಕಾರ್ಯದಲ್ಲಿ ತೊಡಗಿಸಿಕೊಂಡ ಹಾಗೂ ಅಧಿಕೃತ ಪಾಸ್ ಹೊಂದಿದವರನ್ನು ಮಾತ್ರ ಅವಕಾಶ ಕೊಟ್ಟು ಉಳಿದ ಯಾರೇ ರಸ್ತೆಗೆ ಬಂದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜಗುರಿಸಲಾಗುವುದು’ ಎಂದು ಅವರು ಎಚ್ಚರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.