ಶುಕ್ರವಾರ, ಮೇ 27, 2022
27 °C
ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

ಆರು ತಿಂಗಳಿಗೊಮ್ಮೆ ಬಸವಕಲ್ಯಾಣಕ್ಕೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬಸವಕಲ್ಯಾಣ (ಬೀದರ್ ಜಿಲ್ಲೆ): ಅನುಭವ ಮಂಟಪ ನಿರ್ಮಾಣ ಯೋಜನೆಗೆ ಚಾಲನೆ ದೊರಕಿದೆ. ಇನ್ನು ಆರು ತಿಂಗಳಿಗೊಮ್ಮೆ ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಬಸವಕಲ್ಯಾಣ ಕ್ಷೇತ್ರ ಸಮಿತಿ ಹಾಗೂ ವಿಕಾಸ ಅಕಾಡೆಮಿ ವತಿಯಿಂದ ನಗರದ ತೇರು ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಯಾತ್ರಾ ಪರ್ವ (ಮುಂದಿನ ಐದು ವರ್ಷಗಳ ಯೋಜನೆ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ, ವಿದೇಶದಿಂದ ಜನ ಇಲ್ಲಿಗೆ ಬಂದು ತೃಪ್ತಿ ಪಡುವ ರೀತಿಯಲ್ಲಿ ಸರ್ಕಾರ ಹಾಗೂ ಸಮಾಜದ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದರು.

ಬಸವಕಲ್ಯಾಣದ 300 ಎಕರೆ ಪ್ರದೇಶದಲ್ಲಿ ವಿವಿಧ ಸ್ಮಾರಕಗಳಿವೆ. ಮುಸ್ಲಿಮರು 54 ಮನೆಗಳನ್ನು ಖಾಲಿ ಮಾಡಿ ಸಹಕಾರ ನೀಡಿದ್ದಾರೆ. ನಗರವನ್ನು ಸುಂದರ ಸಾಂಸ್ಕೃತಿಕ ನಗರವನ್ನಾಗಿ ಮಾಡಲು ಪಣ ತೊಡಲಾಗಿದೆ. ಇಲ್ಲಿಗೆ ಜನ ಭೇಟಿ ಕೊಟ್ಟು ನಾಡಿನ ಪರಂಪರೆ ಅರಿತುಕೊಳ್ಳುವಂತೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಿತ್ಯ 5 ಸಾವಿರ ಜನ ಬರಬೇಕು ಎನ್ನುವ ದಿಸೆಯಲ್ಲಿ ಐದು ವರ್ಷಗಳ ಯೋಜನೆ ರೂಪಿಸಲಾಗಿದೆ. ಅದರಂತೆ ಬಸವಕಲ್ಯಾಣದ ಪರುಷಕಟ್ಟೆ, ರಿಂಗ್‌ ರಸ್ತೆ, ತ್ರಿಪುರಾಂತ ಅಭಿವೃದ್ಧಿಗೂ ಮುಖ್ಯಮಂತ್ರಿ ಒತ್ತುಕೊಡಬೇಕು ಎಂದು ಮನವಿ ಮಾಡಿದರು.

ಅನುಭವ ಮಂಟಪ ನಿರ್ಮಾಣ ಕಾಮಗಾರಿಗೆ ಈಗಾಗಲೇ ಭೂಮಿ ಪೂಜೆ ನೆರವೇರಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಮುಗಿದು ಕಾಮಗಾರಿಯೂ ಆರಂಭವಾಗಲಿದೆ. ಬಸವಣ್ಣನ ತತ್ವಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಇದು ಕಲ್ಯಾಣದ ಹಿರಿಮೆಯನ್ನು ತಿಳಿಸುತ್ತದೆ. ಮುಖ್ಯಮಂತ್ರಿ ಬಸವಕಲ್ಯಾಣದಲ್ಲಿ ಕಾಮಗಾರಿ ವಿಳಂಬ ಆಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.