ಶನಿವಾರ, ಫೆಬ್ರವರಿ 4, 2023
28 °C

ಮತದಾರರ ಪಟ್ಟಿ ಪರಿಷ್ಕರಣೆ: ಡಿ.9 ಕೊನೆಯ ದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಮಲನಗರ: ‘ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಒಂದು ತಿಂಗಳ ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಕರಡು ಮತದಾರ ಪಟ್ಟಿ ಪ್ರಕಟಿಸಲಾಗುವುದು. ಮತದಾರರು ತಪ್ಪದೇ ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳಬೇಕು’ ಎಂದು ಸಿದ್ರಾಮೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಓಂಕಾಂತ ಪಾಟೀಲ ಹೇಳಿದರು.

ಪಟ್ಟಣದ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮತದಾರರು ಮತದಾರರ ಯಾದಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋದಲ್ಲಿ ಮತ್ತೆ ಸೇರ್ಪಡೆ ಮಾಡಿಸಿಕೊಳ್ಳಬಹುದು. ಮೊಬೈಲ್ ಸಂಖ್ಯೆ ಬದಲಾವಣೆ, ವಿಳಾಸ ಬದಲಾವಣೆ ತಿದ್ದುಪಡಿಗೆ ಒಂದು ತಿಂಗಳು ಅವಕಾಶ ನೀಡಲಾಗಿದೆ. ಈ ಕುರಿತು ಬಿಎಲ್‍ಒಗಳಿಗೆ ನಿಗದಿತ ಅರ್ಜಿ ಸಲ್ಲಿಸಬೇಕು ಎಂದರು.

ತಹಶೀಲ್ದಾರ್ ರಮೇಶ ಪೆದ್ದೇ ಮಾತನಾಡಿ,‘ಡಿಸೆಂಬರ್ 9ರವರೆಗೆ ಪರಿಷ್ಕರಣೆಗೆ ಕೊನೆ ಅವಕಾಶವಿದೆ. ಜ.1, 2023ಕ್ಕೆ ಅನ್ವಯವಾಗುವಂತೆ ಅರ್ಹ ಮತದಾರರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅರ್ಹ ಹೊಸ ಮತದಾರರು ನಿಗದಿತ ಅರ್ಜಿ ನಮೂನೆ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕು’ ಎಂದು ಹೇಳಿದರು.

ಪಿಯು ವಿಜ್ಞಾನ ಕಾಲೇಜಿನ ಆಡಳಿತಾಧಿಕಾರಿ ವಿವೇಕಾನಂದ ಜೋಶಿ, ಶಾಂತಿವರ್ಧಕ ಪಿಯು ಕಾಲೇಜಿನ ಪ್ರಾಂಶುಪಾಲ ಶಿವಾಜಿ ಆರ್.ಎಚ್, ಮೇಲ್ವಿಚಾರಕ ಪ್ರಕಾಶ ಮಾನಕರಿ, ಸುಚಿತ್ರಾ ಪಾಟೀಲ, ಮಾರುತಿ ಪಾಟೀಲ, ಮಿಥುನ್ ಫೌಜಿ, ಡಾ.ಬಾಲಾಜಿ ಬೋಡ್ಲೆ, ರಮೇಶ ಚವಾಣ್, ಓಂಕಾಂತ.ಜಿ, ಅಂಬಿಕಾ, ಸಾಕ್ಷಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು