ಮಹಿಳೆಯರ ಮತದಾನ ಜಾಗೃತಿ ಅಭಿಯಾನ

ಮಂಗಳವಾರ, ಏಪ್ರಿಲ್ 23, 2019
27 °C
ಲಿಂಗತ್ವ ಅಲ್ಪಸಂಖ್ಯಾತ, ದಮನಿತ, ಧನಶ್ರೀ ಯೋಜನೆ

ಮಹಿಳೆಯರ ಮತದಾನ ಜಾಗೃತಿ ಅಭಿಯಾನ

Published:
Updated:
Prajavani

ಬೀದರ್‌: ಜಿಲ್ಲಾ ಸ್ವೀಪ್ ಸಮಿತಿಯು ಬುಧವಾರ ಜಿಲ್ಲಾ ರಂಗಮಂದಿರದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮತ್ತು ಧನಶ್ರೀ ಯೋಜನೆಯ ಮಹಿಳೆಯರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಿತು.

ರಂಗಮಂದಿರದ ಆವರಣದಲ್ಲಿ ಮತದಾನ ಜಾಗೃತಿ ಅಂಗವಾಗಿ ಲೈಂಗಿಕ ಅಲ್ಪಸಂಖ್ಯಾತರು ರಂಗೋಲಿ ಬಿಡಿಸಿದರು. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಅತ್ಯುತ್ತಮ ರೀತಿಯಲ್ಲಿ ರಂಗೋಲಿ ಬಿಡಿಸಿದ ಮಹಿಳೆಯರಿಗೆ ಬಹುಮಾನ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮತದಾನವು ದೇಶದ ಪ್ರತಿಯೊಬ್ಬ ನಾಗರಿಕರ ಹಕ್ಕಾಗಿದೆ. ಏ. 23ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿಯ ಡಾ.ಗೌತಮ ಅರಳಿ, ಬೀರೇಂದ್ರಸಿಂಗ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಚೇಂದ್ರ ವಾಗಮಾರೆ, ಮಹಿಳಾ ಅಭಿವೃದ್ಧಿ ನಿಗಮ ನಿರೀಕ್ಷಕಿ ಯಲ್ಲಮ್ಮ ಇದ್ದರು.

ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಸ್ವೀಪ್ ಸಮಿತಿಯ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಚಿತ್ರಕಲಾ ಸ್ಪರ್ಧೆ: ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ನಗರದ ಬರೀದ್‌್ ಶಾಹಿ ಉದ್ಯಾನದಲ್ಲಿ ಚಿತ್ರಕಲಾ ಶಿಕ್ಷಕರಿಗಾಗಿ ಮತದಾನ ಜಾಗೃತಿ ಮೂಡಿಸುವ ದಿಸೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.

ಚಿತ್ರಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಚಿತ್ರಕಲಾ ಶಿಕ್ಷಕರು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಹಲವು ಬಗೆಯ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಜಿಲ್ಲಾ ಪಂಚಾಯಿತಿ ಸಿಇಒ ಮಹಾಂತೇಶ ಬೀಳಗಿ, ಜಿಲ್ಲಾ ಸ್ವೀಪ್ ಸಮಿತಿಯ ಡಾ.ಗೌತಮ ಅರಳಿ, ಲಲಿತ ಕಲಾ ಅಕಾಡೆಮಿಯ ಸದಸ್ಯ ಯೋಗೀಶ ಮಠದ ಚಿತ್ರಕಲೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !