ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ದಿನ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಮಹಿಳೆಯರ ನೋಂದಣಿ ಹೆಚ್ಚಳಕ್ಕೆ ಆದ್ಯತೆ ಕೊಡಿ: ಮಹಾಂತೇಶ ಬೀಳಗಿ
Last Updated 16 ಜನವರಿ 2019, 13:09 IST
ಅಕ್ಷರ ಗಾತ್ರ

ಬೀದರ್: ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸ್ವೀಪ್ ಸಮಿತಿ ನಿರ್ಧರಿಸಿದೆ.
ಜಿಲ್ಲಾ, ತಾಲ್ಲೂಕು ಕೇಂದ್ರ ಹಾಗೂ ಮತಗಟ್ಟೆ ಮಟ್ಟದಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಇಲ್ಲಿಯ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷ ಮಹಾಂತೇಶ ಬೀಳಗಿ ಸೂಚನೆ ನೀಡಿದರು.

‘ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದವರನ್ನು ಸನ್ಮಾನಿಸಲಾಗುವುದು. ಪ್ರೌಡ್ ಟು ಬಿ ಓಟರ್ ರೆಡಿ ಟು ವೋಟ್ ಘೋಷವಾಕ್ಯ, ಚುನಾವಣಾ ಆಯೋಗದ ಲೊಗೊ ಇರುವ ಬ್ಯಾಡ್ಜ್ ಹಾಗೂ ಚುನಾವಣಾ ಗುರುತಿನ ಚೀಟಿ ವಿತರಿಸಲಾಗುವುದು’ ಎಂದು ತಿಳಿಸಿದರು.

‘ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್, ನೋಂದಣಿ ಸೇರ್ಪಡೆ ವಿಡಿಯೊಗಳನ್ನು ಪ್ರದರ್ಶಿಸಿ ಮತದಾರರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.

‘ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಮಹಿಳಾ ಮತದಾರರ ನೋಂದಣಿ ಹೆಚ್ಚಬೇಕಾಗಿದೆ. ಹೀಗಾಗಿ ಕಾರ್ಯಕ್ರಮದಲ್ಲಿ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಸ್ವಸಹಾಯ ಸಂಘಗಳ ಸದಸ್ಯೆಯರನ್ನು ಸೇರಿಸಲು ಆದ್ಯತೆ ಕೊಡಬೇಕು’ ಎಂದು ತಿಳಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರನ್ನು ಪ್ರತಿಯೊಂದು ಕಾರ್ಯಕ್ರಮಕ್ಕೂ ನಿಯೋಜಿಸುವುದನ್ನು ಬಿಟ್ಟುಬಿಡಬೇಕು. ಅವರು ಬೇರೆ ಕಾರ್ಯಕ್ರಮಗಳಿಗೆ ಹೋದ ಸಂದರ್ಭದಲ್ಲಿ ಅಂಗನವಾಡಿಗಳಲ್ಲಿ ಮಕ್ಕಳ ಆರೈಕೆಗೆ ತೊಡಕು ಉಂಟಾಗುತ್ತಿದೆ. ಕಾರಣ ಅಂಗನವಾಡಿ ಕಾರ್ಯಕರ್ತೆಯರ ಬದಲು ಸ್ವಸಹಾಯ ಸಂಘ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸದಸ್ಯೆಯರನ್ನು ಕಾರ್ಯಕ್ರಮಕ್ಕೆ ಕರೆಸಬೇಕು’ ಎಂದು ಹೇಳಿದರು.

‘ಮತದಾರರ ದಿನಾಚರಣೆ ಕಾರ್ಯಕ್ರಮ ಎಲ್ಲರ ಗಮನ ಸೆಳೆಯುವಂತಾಗಲು ಬೃಹತ್ ಜನಜಾಗೃತಿ ರ್‌್್ಯಾಲಿಗಳನ್ನು ನಡೆಸಬೇಕು’ ಎಂದು ತಿಳಿಸಿದರು.

‘ಶಾಲಾ ಕಾಲೇಜುಗಳಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ಗೆ ಆಯಾ ಶಾಲೆಯ ಪ್ರಾಚಾರ್ಯರು ಮುಖ್ಯಸ್ಥರಾಗಿರುತ್ತಾರೆ. ಕ್ಲಬ್‌ಗೆ ಉತ್ತಮ ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಮತದಾರರ ಹೆಸರು ನೋಂದಣಿ, ಮತದಾರರ ಜಾಗೃತಿ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಲ್ಲಿ ಉತ್ತಮ ಕಾರ್ಯ ಮಾಡಿದವರಿಗೆ ಸನ್ಮಾನ ಮಾಡಲಾಗುವುದು’ ಎಂದು ಸ್ವೀಪ್ ಸಮಿತಿಯ ಸಮನ್ವಯಾಧಿಕಾರಿ ಗೌತಮ ಅರಳಿ ಹೇಳಿದರು.

ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT