ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

Last Updated 20 ಅಕ್ಟೋಬರ್ 2018, 15:29 IST
ಅಕ್ಷರ ಗಾತ್ರ

ಬೀದರ್: ‘2019ರ ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರ ಕರಡು ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದೆ. 2019ರ ಜನವರಿ1ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದು’ ಎಂದು ಜಿಲ್ಲಾಧಿಕಾರಿ ಎಚ್‌.ಆರ್.ಮಹಾದೇವ ತಿಳಿಸಿದರು.

‘ಹೆಸರು ನೋಂದಣಿಗೆ ಫಾರ್ಮ್‌ ಸಂಖ್ಯೆ 6, ಪಟ್ಟಿಯಿಂದ ಹೆಸರು ತೆಗೆಯಲು ಫಾರ್ಮ್‌ ಸಂಖ್ಯೆ) 7 ,
ದೋಷ ತಿದ್ದುಪಡಿಗೆ ಫಾರ್ಮ್‌ ಸಂಖ್ಯೆ 8 ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಳಾಸ ಬದಲಾಯಿಸಲು ಫಾರ್ಮ್‌ ಸಂಖ್ಯೆ 8ಎ ಭರ್ತಿ ಮಾಡಿ ಸಲ್ಲಿಸಬೇಕು’ ಎಂದು ಶನಿವಾರ ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ನಿಗದಿತ ಮತದಾರರ ನೋಂದಣಿ ಕೇಂದ್ರದಲ್ಲಿ ಅರ್ಜಿಗಳು ಉಚಿತ ಲಭ್ಯ ಇವೆ. ಹೊಸ ಮತದಾರರು ಆನ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ದತ್ತಾಂಶ ಅಪ್‌ಡೇಟ್‌ ಮಾಡಲು 2019ರ ಜನವರಿ 3 ಕೊನೆಯ ದಿನವಾಗಿದೆ. ಜನವರಿ 4 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 1,504 ಮತಗಟ್ಟೆಗಳಿವೆ. ಪ್ರಸ್ತುತ 6,86,549 ಪುರುಷರು ಹಾಗೂ 6,33,191 ಮಹಿಳೆಯರು ಸೇರಿ 13,19,740 ಮತದಾರರು ಇದ್ದಾರೆ. ಜನಸಂಖ್ಯೆಗೆ ಹೋಲಿಸಿದರೆ ಮತದಾರರ ಸಂಖ್ಯೆಯಲ್ಲಿ ಮಹಿಳೆಯರ ಅನುಪಾತ ಕಡಿಮೆ ಇದೆ. ಜಿಲ್ಲೆಯಲ್ಲಿ ಬಸವಕಲ್ಯಾಣ ಕ್ಷೇತ್ರದಲ್ಲಿ ಮಹಿಳೆಯರ ಲಿಂಗಾನುಪಾತ ಅತಿ ಕಡಿಮೆ ಇದೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡರೂ ಅನುಪಾತದಲ್ಲಿ ಏರಿಕೆಯಾಗಿಲ್ಲ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT