ಸೋಮವಾರ, ಜನವರಿ 20, 2020
18 °C
ಬೀದರ್‌: ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಚಾಲನೆ

ಮಿಂಚಿನ ನೋಂದಣಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾಡಳಿತದಿಂದ ಜನವರಿ 6 ರಿಂದ 8 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿರುವ ಮತದಾರರ ಮಿಂಚಿನ ನೋಂದಣಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಸೋಮವಾರ ಇಲ್ಲಿಯ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ತಪ್ಪಾದ ಹೆಸರಿನ ತಿದ್ದುಪಡಿ ಮಾಡುವ ಉದ್ದೇಶದಿಂದ ಈ ನೋಂದಣಿ ಅಭಿಯಾನ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 70 ರಿಂದ 80ರಷ್ಟು ಜನರು ಮಾತ್ರ ಮತದಾರರ ಗುರುಚಿನ ಚೀಟಿ ಹೊಂದಿದ್ದಾರೆ. ಶೇಕಡ 100ರಷ್ಟು ಜನರಿಗೆ ಮತದಾರರ ಗುರುತಿನ ಚೀಟಿಯನ್ನು ಕಲ್ಪಿಸುವ ಉದ್ದೇಶ ಜಿಲ್ಲಾಡಳಿತ ಹೊಂದಿದೆ. ಅದರಂತೆ ಮತದಾನಕ್ಕೆ ಅರ್ಹತೆ ಹೊಂದಿದವರು ಅರ್ಜಿ ನಮೂನೆ-6ನ್ನು ಹತ್ತಿರದ ಬಿಎಲ್‍ಓ, ಕಾಲೇಜುಗಳಲ್ಲಿ ಸಲ್ಲಿಸಬೇಕು ಹಾಗೂ ಆನ್‌ಲೈನ್‌ ಮೂಲಕವು ಅರ್ಜಿ ಸಲ್ಲಿಸಬಹುದು’ ಎಂದು
ತಿಳಿಸಿದರು.

ಸ್ವೀಪ್ ಸಮಿತಿಯ ಜಿಲ್ಲಾ ನೊಡಲ್ ಅಧಿಕಾರಿ ಗೌತಮ ಅರಳಿ ಮಾತನಾಡಿ,‘ 18 ವರ್ಷ ಪೂರ್ಣಗೊಂಡವರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಈ ನೊಂದಣಿ ಅಭಿಯಾನ ಆಯೋಜಿಸಲಾಗಿದೆ.ಆದ್ದರಿಂದ ಎಲ್ಲರೂ ಅರ್ಜಿಯನ್ನು ಸಲ್ಲಿಸಿ ಗುರುತಿನನ ಚೀಟಿ ಪಡೆದುಕೊಳ್ಳಬೇಕು’ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ್ ಮಾತನಾಡಿ,‘ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಮಹತ್ವದ್ದಾಗಿರುತ್ತದೆ. ಅರ್ಹರಿಗೆ ಮತದಾರರ ಗುರುತಿನ ಚೀಟಿ ನೀಡಲು ಸರ್ಕಾರದಿಂದ ಉತ್ತಮ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಸಂಸ್ಥೆಯ ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿದರು.
ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಜನವಾಡಕರ್, ಕಮಲಾಬಾಯಿ ದಿಕ್ಷೀತ್, ಚುನಾವಣಾ ಶಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು