ಗುರುವಾರ , ನವೆಂಬರ್ 14, 2019
19 °C

ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ 22 ರಿಂದ

Published:
Updated:
Prajavani

ಬೀದರ್: ‘ಗುರುನಾನಕ ಜಯಂತಿ ಪ್ರಯುಕ್ತ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಅಕ್ಟೋಬರ್ 22 ರಿಂದ 25 ರವರೆಗೆ ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ 22ನೇ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಆಯೋಜಿಸಲಾಗಿದೆ’ ಎಂದು ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜು ಪ್ರಾಚಾರ್ಯ ರವೀಂದ್ರ ಎಕಲಾರಕರ್ ಹೇಳಿದರು.

‘ವಿಶ್ವವಿದ್ಯಾಲಯದ ಕುಲಪತಿ ಕರಿಸಿದ್ದಪ್ಪ 22 ರಂದು ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜು ಅಧ್ಯಕ್ಷ ಸರ್ದಾರ್ ಬಲಬೀರಸಿಂಗ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಒಲಿಂಪಿಕ್‌ನಲ್ಲಿ ಚಿನ್ನದ ಪದಕ ವಿಜೇತ ಭೀಮಸಿಂಗ್, ಗುರುನಾನಕ ದೇವ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ರೇಷ್ಮಾ ಕೌರ್ ಭಾಗವಹಿಸುವರು’ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ರಾಜ್ಯದ 200 ಕಾಲೇಜುಗಳ 1,500 ವಿದ್ಯಾರ್ಥಿಗಳು ಈಗಾಗಲೇ ಹೆಸರು ನೋಂದಣಿ ಮಾಡಿಸಿದ್ದಾರೆ. ಸ್ಪರ್ಧಾಳುಗಳಿಗೆ ಗುರುದ್ವಾರ ಆವರಣದಲ್ಲಿ ಇರುವ ವಸತಿ ಗೃಹದಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

‘22 ರಂದು 10 ಸಾವಿರ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, 4*100 ಮೀಟರ್ ರಿಲೇ, 23 ರಂದು 20 ಕಿ.ಮೀ. ಕಾಲ್ನಡಿಗೆ, ಡಿಸ್ಕಸ್ ಥ್ರೋ, 100, 400 ಮೀಟರ್ ಓಟ, ಎತ್ತರ ಜಿಗಿತ, ಶಾಟ್‌ಪಟ್, ಬ್ಯಾಸ್ಕೆಟ್‌ಬಾಲ್, ಜಾವೆಲಿನ್ ಥ್ರೊ ಸ್ಪರ್ಧೆಗಳು ನಡೆಯಲಿವೆ’ ಎಂದು ತಿಳಿಸಿದರು.

‘25 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಲ್ಪನಾ ಗೋಪಾಲನ್, ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ ಪಾಲ್ಗೊಳ್ಳುವರು’ ಎಂದು ಹೇಳಿದರು.

ಕಾಲೇಜಿನ ಶೈಕ್ಷಣಿಕ ನಿರ್ದೇಶಕ ಬಿ.ಎಸ್. ಧಾಲಿವಾಲ್, ಪ್ರೊ. ರಾಜಶೇಖರ ಗಾಯತೊಂಡ ಸುದ್ದಿಗೋಷ್ಠಿಯಲ್ಲಿ ಇದ್ದರು.

ಪ್ರತಿಕ್ರಿಯಿಸಿ (+)