ಸೋಮವಾರ, ಅಕ್ಟೋಬರ್ 21, 2019
25 °C
ಕುಡಿಯುವ ನೀರಿನ ಘಟಕ ಸ್ಥಾಪಿಸಿದ ಮುಖಂಡ ಗುರುನಾಥ ಕೊಳ್ಳೂರ

ಕೆವಿಕೆಯಲ್ಲಿ ಇನ್ನು ರೈತರಿಗೆ ಶುದ್ಧ ನೀರು

Published:
Updated:
Prajavani

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಬಳಿಯ ಕೃಷಿ ವಿಜ್ಞಾನ ಕೇಂದ್ರ ದಲ್ಲಿ ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ಔದರ್ಯ ಮೆರೆದಿದ್ದಾರೆ.

ಕೇಂದ್ರಕ್ಕೆ ಬರುವ ರೈತರು, ತರಬೇತುದಾರರು ಹಾಗೂ ಕೃಷಿ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ತಂಪಾದ ಶುದ್ಧ ಕುಡಿಯುವ ನೀರು ಒದಗಿಸಲು ಅವರು ಘಟಕ ಸ್ಥಾಪಿಸಿದ್ದಾರೆ. ಕೇಂದ್ರದ ಆವರಣದಲ್ಲಿ ವಿಶ್ರಾಂತಿ ಪಡೆಯಲು ಬೇಂಚ್‌ಗಳನ್ನೂ ಹಾಕಿಸಿದ್ದಾರೆ.

ಕೃಷಿ ವಿಜ್ಞಾನ ಕೇಂದ್ರವು ಕೇಂದ್ರದ ಆವರಣದಲ್ಲಿ ಅವರಿಗೆ ಅಭಿ ನಂದನಾ ಸಮಾರಂಭ ಏರ್ಪಡಿಸಿ ಕೃತಜ್ಞತೆ ಸಲ್ಲಿಸಿದೆ.
ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪಾವನ ಧಾಮ ಕೇಂದ್ರದ ಪ್ರತಿಮಾ ಬಹೆನ್‌ ಮಾತನಾಡಿ, ‘ಕೃಷಿ ವಿಜ್ಞಾನ ಕೇಂದ್ರಕ್ಕೆ ನಿರಂತರ ರೈತರು ಭೇಟಿ ಕೊಡುತ್ತಾರೆ. ಮೇಲಿಂದ ಮೇಲೆ ತರಬೇತಿ ಕಾರ್ಯಕ್ರಮಗಳು ನಡೆಯುತ್ತವೆ. ಕೃಷಿ ಡಿಪ್ಲೊಮಾ ಕಾಲೇಜು ಸಹ ಇದರೊಳಗೆ ಇದೆ. ಗುರುನಾಥ ಕೊಳ್ಳೂರ ಅವರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶುದ್ಧ ನೀರಿನ ಘಟಕ ಸ್ಥಾಪಿಸಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆವರಣದಲ್ಲಿ ಬೇಂಚ್‌ಗಳನ್ನೂ ಅಳವಡಿಸಿ ಮಾದರಿ ಕೆಲಸ ಮಾಡಿದ್ದಾರೆ’ ಎಂದು ಪ್ರಶಂಶಿಸಿದರು.

‘ಸರಳ ಸ್ವಭಾವದ ಕೊಳ್ಳೂರ ಸಾಮಾಜಿಕ ಕಾಳಜಿ ಹೊಂದಿದ್ದಾರೆ. ಫಲಾಪೇಕ್ಷೆ ಇಲ್ಲದೆ ಸಮಾಜೋಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮನುಷ್ಯ ಯಾವಾಗಲೂ ಸತ್ಕಾರ್ಯಗಳನ್ನು ಮಾಡಬೇಕು. ಅದು ಉತ್ತಮ ಫಲವನ್ನೇ ನೀಡುತ್ತದೆ. ಒಳ್ಳೆಯ ಕೆಲಸ ಮಾಡುವವರಿಗೆ ಏನೂ ಕೊರತೆ ಆಗುವುದಿಲ್ಲ. ಸಮಾಜದ ಆಶೀರ್ವಾದ ಸದಾ ಅವರೊಂದಿಗೆ ಇರುತ್ತದೆ’ ಎಂದು ತಿಳಿಸಿದರು.

ಗುರುನಾಥ ಕೊಳ್ಳೂರ ಮಾತನಾಡಿ, ‘ರೈತ ಕುಟುಂಬದಿಂದ ಬಂದಿರುವ ನಾನು ಅನೇಕ ಕಷ್ಟಗಳನ್ನು ಎದುರಿಸಿದ್ದೇನೆ. ಕೃಷಿ ಕಾರ್ಮಿಕನಾಗಿ ಕೆಲಸ ಮಾಡಿದ್ದೇನೆ. ಪ್ರತಿ ಹಂತದಲ್ಲೂ ಸಂಘರ್ಷ ಮಾಡಿದ್ದೇನೆ. ಶ್ರಮದಿಂದ ಏನು ಬೇಕಾದರೂ ಸಾಧಿಸಬಹುದು. ಬೆವರು ಸುರಿಸಿ ದುಡಿದರೆ ಕೃಷಿಯಲ್ಲೂ ಒಳ್ಳೆಯ ಆದಾಯ ಪಡೆಯಬಹುದು’ ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಕೆ.ಭವಾನಿ ಅಧ್ಯಕ್ಷತೆ ವಹಿಸಿದ್ದರು. ಕೊಳ್ಳೂರ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು.

ಕನ್ನಡ ಪರ ಸಂಘಟನೆಯ ಮುಖಂಡ ವಿರೂಪಾಕ್ಷ ಗಾದಗಿ, ಪ್ರಭುಶೆಟ್ಟಿ ಮುಚಳಂಬೆ, ರೋಹಿತ್ ಬಿರಾದಾರ, ಶಿವಾನಂದ ಬಿರಾದಾರ ಉಪಸ್ಥಿತರಿದ್ದರು.

ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ಸ್ವಾಗತಿಸಿದರು. ರಾಮದಾಸ ಕಾಂಬಳೆ ನಿರೂಪಿಸಿದರು. ಸಿದ್ದು ಮಣಗೆ ವಂದಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)