ಬುಧವಾರ, ಡಿಸೆಂಬರ್ 11, 2019
26 °C
ಅಹೋರಾತ್ರಿ ಧರಣಿ ಸತ್ಯಾಗ್ರಹ ಹಿಂಪಡೆದ ರೈತರು

ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೀದರ್: ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಟ್ಟ ಕಾರಣ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಔರಾದ್ ಹಾಗೂ ಬೀದರ್ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಏಳು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಗುರುವಾರ ಕೈಬಿಟ್ಟಿದ್ದಾರೆ.

ಬೀದರ್ ಉಪ ವಿಭಾಗಾಧಿಕಾರಿ ಶಿವಕುಮಾರ ಶೀಲವಂತ ಅವರು ಕಾರಂಜಾ ಜಲಾಶಯದಿಂದ ಔರಾದ್ ಹಾಗೂ ಬೀದರ್ ತಾಲ್ಲೂಕಿಗೆ ನೀರು ಬಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಪ್ರಯುಕ್ತ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಮಂತ ಬಿರಾದಾರ ತಿಳಿಸಿದ್ದಾರೆ.

ಈಗ ಬಿಟ್ಟಿರುವ ನೀರು ಔರಾದ್ ಹಾಗೂ ಬೀದರ್ ತಾಲ್ಲೂಕಿನ ಗ್ರಾಮಗಳಿಗೆ ತಲುಪದಿದ್ದರೆ ಬರುವ ದಿನಗಳಲ್ಲಿ ರೈತರು ಹಾಗೂ ಜಾನುವಾರುಗಳೊಂದಿಗೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು