ಔರಾದ್: ತಾಲ್ಲೂಕಿನ ನಾಗಮಾರಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಹು ದಿನಗಳ ನಂತರ ಕುಡಿಯುವ ನೀರು ಪೂರೈಕೆಯಾಗಿದ್ದು, ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿದೆ.

ಕುಡಿಯುವ ನೀರಿಗೆ ವಿದ್ಯಾರ್ಥಿಗಳ ಪರದಾಟ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ ಜನವರಿ.31 ರಂದು ವಿಶೇಷ ವರದಿ ಪ್ರಕಟಿಸಿತ್ತು. ವರದಿಯಿಂದ ಎಚ್ಚತ್ತುಕೊಂಡ ಅಧಿಕಾರಿಗಳು ಶಾಲೆ ಆವರಣದಲ್ಲಿ ಕೊಳವೆ ಬಾವಿ ಕೊರೆಸಿದ್ದು, ಸೋಮವಾರ ಅದಕ್ಕೆ ಮೋಟರ್ ಅಳವಡಿಸಿ ನೀರು ಹರಿಸಿದ್ದಾರೆ. ಮಕ್ಕಳು ನೀರಿನ ಜತೆ ಆಟ ಆಡಿ ಕೆಲ ಹೊತ್ತು ಕುಣಿದು ಸಂತಸ ಪಟ್ಟರು.

‘ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಪತ್ರಿಕೆಯಿಂದ ತಿಳಿದು ಮರುದಿನವೇ ನಾಗಮಾರಪಳ್ಳಿ ಶಾಲೆಗೆ ಭೇಟಿ ನೀಡಿ ಹೊಸ ಕೊಳವೆ ಬಾವಿ ಕೊರೆಯಲು ಪ್ರಸ್ತಾವನೆ ಸಲ್ಲಿಸಲಾಯಿತು. ಅದರಂತೆ ಕೆಆರ್ಐಡಿಎಲ್ ದಿಂದ ಕೊಳವೆ ಬಾವಿ ಕೊರೆಸಿ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ತಿಳಿಸಿದರು.

ನಾಗಮಾರಪಳ್ಳಿ ಸರ್ಕಾರಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಅಲ್ಲದೆ ‘ಪ್ರಜಾವಾಣಿ’ ಪ್ರಕಟಿಸಿದ ವರದಿಯಿಂದ ಅಧಿಕಾರಿಗಳು ಎಚ್ಚೆತ್ತುಕೊಂಡು ಕೊಳವೆ ಬಾವಿ ಕೊರೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಗ್ರಾಮಸ್ಥ ಧನರಾಜ ನಾಗಮಾರಪಳ್ಳಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.