ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಜೀವನ ಮಿಷನ್: ಆದ್ಯತೆ ಮೇರೆಗೆ ಯೋಜನೆ ಪೂರ್ಣಗೊಳಿಸಲು ‌ಸಚಿವ ಖೂಬಾ ಸೂಚನೆ

Last Updated 17 ಜನವರಿ 2022, 7:56 IST
ಅಕ್ಷರ ಗಾತ್ರ

ಕಲಬುರಗಿ: 2023ರ ಒಳಗಾಗಿ ಜಲಜೀವನ ಮಿಷನ್ ಅಡಿ ಜಿಲ್ಲೆಯ ಎಲ್ಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಸಗೊಬ್ಬರ, ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಒಂದು ಮನೆಗೆ ನೀರು ಪೂರೈಕೆ ಇಲ್ಲವಾದರೂ ಪ್ರಗತಿ ‌ಕಡಿಮೆಯಾದಂತೆ. ಹೀಗಾಗಿ, ಎಲ್ಲ ಮನೆಗಳಿಗೂ ನೀರು ಪೂರೈಕೆಯಾಗುವಂತೆ ಗಮನ ಹರಿಸಬೇಕು. ಜಲಜೀವನ ಮಿಷನ್ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಇದರ ಮೇಲ್ವಿಚಾರಣೆ ವಹಿಸಿದ್ದಾರೆ. ಆದ್ದರಿಂದ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಕುಡಿಯುವ ನೀರಿನ ಯೋಜನೆಗಳ ಬಗ್ಗೆ ನಿತ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮೇಲ್ವಿಚಾರಣೆ ‌ನಡೆಸಬೇಕು ಎಂದು ಸಚಿವರು ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ಅವರಿಗೆ ಸೂಚಿಸಿದರು.

ಇಲಾಖೆಯಿಂದ ಕೈಗೆತ್ತಿಕೊಂಡ ಕಾಮಗಾರಿಗಳ ಕುರಿತು ಮಾಹಿತಿ ನೀಡಿದ ಗ್ರಾಮೀಣ ಕುಡಿಯುವ ‌ನೀರು ವಿಭಾಗದ ಕಾರ್ಯನಿರ್ವಾಹಕ ‌ಎಂಜಿನಿಯರ್ ಅಜೀಜುದ್ದೀನ್, ಒಟ್ಟಾರೆ 386 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 126 ಕಾಮಗಾರಿಗಳ ಸರ್ವೆ ಕಾರ್ಯ ಮುಗಿದಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT