ಬೆಂಗಳೂರು: ಮುಂಬೈಯಲ್ಲಿ ಭಾರತ– ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಪಂದ್ಯದ ವೇಳೆ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಪಂದ್ಯದ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ನಗರದ ಪೊಲೀಸ್ ಕಮಿಷನರ್ ಭಾಸ್ಕರ ರಾವ್ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಪತ್ರ ಬರೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾಸ್ಕರ ರಾವ್, ‘ಪಂದ್ಯದ ವೇಳೆ ಹೆಚ್ಚಿನ ಭದ್ರತೆ ಒದಗಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ.ಕ್ರಿಕೆಟ್ ಅಭಿಮಾನಿಗಳನ್ನು ತಪಾಸಣೆಗೆ ಒಳಪಡಿಸಿ ಮೈದಾನದ ಒಳಗೆ ಬಿಡುವಂತೆ ತಿಳಿಸಿದ್ದೇನೆ’ ಎಂದರು.

‘ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ತೆಗೆದುಕೊಂಡು ಪಂದ್ಯ ವೀಕ್ಷಿಸಲು ಬರುತ್ತಾರೆ. ಈ ವೇಳೆ, ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸಿದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.