ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಪೇಟೆ | 500 ಜೋಡಿಗಳ ಸಾಮೂಹಿಕ ವಿವಾಹ

Published 29 ಜೂನ್ 2024, 15:57 IST
Last Updated 29 ಜೂನ್ 2024, 15:57 IST
ಅಕ್ಷರ ಗಾತ್ರ

ಚಿಕ್ಕಪೇಟೆ (ಜನವಾಡ): ಬೀದರ್ ತಾಲ್ಲೂಕಿನ ಚಿಕ್ಕಪೇಟೆ ಗ್ರಾಮದಲ್ಲಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶನಿವಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 500 ಜೋಡಿಗಳ ಸರಳ ಸಾಮೂಹಿಕ ವಿವಾಹ ನಡೆಯಿತು.

ಆಣದೂರಿನ ವೈಶಾಲಿನಗರದ ಭಂತೆ ಧಮ್ಮಾನಂದ ಮದುವೆ ವಿಧಿ- ವಿಧಾನಗಳನ್ನು ನಡೆಸಿಕೊಟ್ಟರು.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳಿಗೆ ಶುಭ ಹಾರೈಸಿದ ಪೌರಾಡಳಿತ ಸಚಿವ ರಹೀಂಖಾನ್ ಅವರು, ಸುಖ, ದುಃಖ ಏನೇ ಎದುರಾದರೂ ಹೊಂದಾಣಿಕೆಯಿಂದ ಬದುಕು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಚಾರ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಶ್ರೀಪತರಾವ್ ದೀನೆ ಮಾತನಾಡಿದರು.
ಮುಖಂಡ ಅವಿನಾಶ ದೀನೆ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು ಎಚ್.ಎಸ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವು ಮಾನಪ್ಪ, ಅನಿಲ್ ಗಂಜಕರ್, ವೈಜಿನಾಥ ಕಾಂಬಳೆ, ಖಲೀಲ್‍ಮಿಯಾ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT