ಬುಧವಾರ, ಮೇ 12, 2021
25 °C

ವೆಲ್ಫೇರ್ ಪಾರ್ಟಿ ಬೆಂಬಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ಈ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್‌ದಿಂದ ಸ್ಪರ್ಧಿಸಿರುವ ಯಸ್ರಬ್ ಅಲಿ ಖಾದ್ರಿ ಅವರಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಬೆಂಬಲ ಸೂಚಿಸಲಾಗಿದೆ.

ನಗರದ ವರ್ಷಾ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ವೆಲ್ಫೇರ್ ಪಾರ್ಟಿ ರಾಜ್ಯ ಘಟಕದ ಕಾರ್ಯದರ್ಶಿ ಮುಜಾಹಿದ್‌ ಪಾಶಾ ಕುರೇಶಿ ಅವರು ಶಾಸಕ ಬಂಡೆಪ್ಪ ಕಾಶೆಂಪೂರ್‌ ಅವರಿಗೆ ಬೆಂಬಲ ಪತ್ರ ನೀಡಿದರು. ‘ಅಭ್ಯರ್ಥಿ ಗೆಲುವಿಗೆ ಶ್ರಮಿಸಲಾಗುವುದು’ ಎಂದೂ ಅವರು ಭರವಸೆ ನೀಡಿದರು.

ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಝಮೀರುಲ್ಲಾ ಖಾನ್, ಡಬ್ಲೂಪಿಐ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್, ರಾಜ್ಯ ಘಟಕದ ಕಾರ್ಯದರ್ಶಿ ಅಜೀಜ್ ಜಾಗೀರದಾರ, ತಾಲ್ಲೂಕು ಘಟಕದ ಅಧ್ಯಕ್ಷ ಅರಫತ್ ಅಹ್ಮದ್ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು