ರಾಜ್ಯಕ್ಕೆ ಬಿಜೆಪಿ ಸಂಸದರ ಕೊಡುಗೆ ಏನು: ದಿನೇಶ್ ಗುಂಡೂರಾವ್ ಪ್ರಶ್ನೆ

7
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ

ರಾಜ್ಯಕ್ಕೆ ಬಿಜೆಪಿ ಸಂಸದರ ಕೊಡುಗೆ ಏನು: ದಿನೇಶ್ ಗುಂಡೂರಾವ್ ಪ್ರಶ್ನೆ

Published:
Updated:
Deccan Herald

ಬೀದರ್: ‘ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ಬಿಜೆಪಿಯ 17 ಸಂಸದರು ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.

‘ಯಡಿಯೂರಪ್ಪ ಅವರು ರಾಜ್ಯದ ಪರವಾಗಿ ಲೋಕಸಭೆಯಲ್ಲಿ ಒಮ್ಮೆಯಾದರೂ ಮಾತನಾಡಿದ್ದಾರಾ’ ಎಂದು ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜನಧ್ವನಿ ಸಮಾವೇಶದಲ್ಲಿ ಕೇಳಿದರು.

‘ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ಕೇಂದ್ರ ಸರ್ಕಾರವು ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರಕ್ಕೆ ₹ 6,000 ಕೋಟಿ, ಮಧ್ಯಪ್ರದೇಶಕ್ಕೆ ₹ 5,000 ಕೋಟಿ, ಗುಜರಾತ್‌ಗೆ ₹ 3,500 ಕೋಟಿ ಅನುದಾನ ಒದಗಿಸಿದ್ದರೆ, ಕರ್ನಾಟಕಕ್ಕೆ ಕೇವಲ ₹ 1,500 ಕೋಟಿ ನೀಡಿದೆ. ಆದರೂ, ಈ ಬಗೆಗೆ ಚಕಾರ ಎತ್ತುತ್ತಿಲ್ಲ’ ಎಂದು ಟೀಕಿಸಿದರು.

‘ಮೋದಿ ನೇತೃತ್ವದ ಸರ್ಕಾರ ನಾಲ್ಕೂವರೆ ವರ್ಷಗಳಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ವಿದೇಶದ ಬ್ಯಾಂಕ್‌ಗಳಿಂದ ಕಪ್ಪು ಹಣ ಮರಳಿ ತಂದಿಲ್ಲ. ಬೆಳೆಗಳಿಗೆ ಬೆಂಬಲ ಬೆಲೆ ಕೊಟ್ಟಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಿಲ್ಲ. ಬಡವರು, ರೈತರು, ಮಹಿಳೆಯರು, ಜನಸಾಮಾನ್ಯರ ಪರವಾಗಿ ಕೆಲಸ ಮಾಡಿಲ್ಲ. ದೇಶದಲ್ಲಿ ವೈಷಮ್ಯ, ಹಿಂಸೆ, ಅಸಹಿಷ್ಣುತೆ, ಅಭದ್ರತೆ ಹೆಚ್ಚಾಗಿದೆ’ ಎಂದು ಟೀಕಿಸಿದರು.

‘ಬರುವ ಲೋಕಸಭೆ ಚುನಾವಣೆಯು ದೇಶದ ಭವಿಷ್ಯ ನಿರ್ಧರಿಸುವ ಚುನಾವಣೆಯಾಗಿದೆ. ಹೈದರಾಬಾದ್ ಕರ್ನಾಟಕದಲ್ಲೇ ಕಾಂಗ್ರೆಸ್‌ನ ಭದ್ರ ಕೋಟೆಯಾಗಿರುವ ಬೀದರ್‌ನಲ್ಲಿ ಕಾಂಗ್ರೆಸ್ ಧ್ವಜ ಹಾರಿಸಬೇಕು’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 1

  Frustrated
 • 2

  Angry

Comments:

0 comments

Write the first review for this !