ಬೀದರ್: ‘ಸಂಸತ್ತಿನಲ್ಲಿ ಇತ್ತೀಚೆಗೆ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿಲ್ಲ. ಬದಲಾಗಿ ಅದು ಬಿಜೆಪಿ ರಾಜಕೀಯ ವಂಚನೆಗೆ ಸೋಲಾಗಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷ ಭೀಮಣ್ಣ ಮೇಟಿ ಅವರು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಾಮಾಣಿಕ ಬದ್ಧತೆ ತೋರಿಸದೆ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಮೋಸತನ ಸಂಸತ್ತಿನಲ್ಲಿ ಸೋತಿದೆ ಎಂದು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನು ತಿದ್ದುಪಡಿ ಮಸೂದೆಗಳನ್ನು ಸರ್ಕಾರ ಗುಪ್ತವಾಗಿ ಸೇರಿಸಿ, ಮಸೂದೆಗೆ ಒಪ್ಪಿಗೆ ಪಡೆಯಲು ಮುಂದಾಗಿತ್ತು. 2011ರ ಜನಗಣತಿ ಆಧಾರಿತ ಕ್ಷೇತ್ರ ಪುನರ್ ವಿಂಡಣೆ ದಕ್ಷಿಣ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಂಥ ರಾಜ್ಯಗಳ ಪ್ರತಿನಿಧಿತ್ವಕ್ಕೆ ಹಾನಿ ಉಂಟು ಮಾಡುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಈ ಕುರಿತು ಮುಖ್ಯಮಂತ್ರಿಗಳು, ನಾಗರಿಕ ಸಮಾಜ ಸಂಸ್ಥೆಗಳು ಹಾಗೂ ಮಹಿಳಾ ಸಂಘಟನೆಗಳು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದರೂ ಕೇಂದ್ರ ಸರ್ಕಾರ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ದೂರಿದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2023ರಿಂದಲೇ ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ ವಿಂಗಡಣೆಯೊಂದಿಗೆ ಸೇರಿಸದೇ ತಕ್ಷಣ ಜಾರಿಗೆ ತರಬೇಕು ಎಂಬ ನಿಲುವು ಹೊಂದಿದೆ. ಆದರೆ, ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿಯನ್ನು ಚುನಾವಣಾ ರಾಜಕೀಯದ ಭಾಗವಾಗಿ ಮಾಡಿಕೊಂಡಿತು ಎಂದರು.

2023ರಲ್ಲಿ ಸಂಸತ್ತಿನಲ್ಲಿ ಅಂಗೀಕೃತವಾದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಸರ್ಕಾರವು 30 ತಿಂಗಳ ಬಳಿಕವೇ ಜಾರಿಗೆ ತಂದಿರುವುದು ಸರ್ಕಾರದ ನೈಜ ಉದ್ದೇಶವನ್ನು ಪ್ರಶ್ನಿಸುವಂತಿದೆ ಎಂದ ಅವರು, ಇದು ಐತಿಹಾಸಿಕ ಕಾನೂನು ಎಂದಾದರೆ ಅದರ ಅನುಷ್ಠಾನಕ್ಕೆ ಎರಡುವರೆ ವರ್ಷ ತಡ ಮಾಡಿರುವುದೇಕೆ ಎಂದು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಐತಿಹಾಸಿಕ ಹೆಜ್ಜೆ ಎಂದು ಹೊಗಳಿದ್ದರು. ಆದರೆ, ಈಗ ಅದನ್ನು ಕ್ಷೇತ್ರ ಪುನರ್ ವಿಂಗಡಣೆಯೊಂದಿಗೆ ಸೇರಿಸಿ, ಮಹಿಳಾ ಸಬಲೀಕರಣದ ಮೂಲ ಉದ್ದೇಶವನ್ನೇ ದುರ್ಬಲಗೊಳಿಸಿದ್ದಾರೆ ಎಂದು ಕಿಡಿ ಕಾರಿದರು.

ಮಹಿಳಾ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಬಗ್ಗೆ ಕೂಡ ಆತಂಕ ವ್ಯಕ್ತಪಡಿಸಿದ ಅವರು, ವಿವಾಹದ ನಂತರ ಸ್ಥಳಾಂತರವಾಗುವ ಮಹಿಳೆಯರ ಮತದಾನದ ಹಕ್ಕು ಕಸಿದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಉನ್ನಾವೋ, ಹತ್ರಾಸ್ ಹಾಗೂ ಬಿಲ್ಕಿಸ್ ಬಾನು ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ಮಹಿಳಾ ಸುರಕ್ಷತೆ ಮತ್ತು ನ್ಯಾಯದ ಬಗ್ಗೆ ಬಿಜೆಪಿ ಸರ್ಕಾರದ ನಿಲುವು ದ್ವಂದ್ವದಿಂದ ಕೂಡಿದೆ ಎಂದರು.

ಕೇಂದ್ರ ಸರ್ಕಾರಕ್ಕೆ ಮಹಿಳಾ ಮೀಸಲಾತಿಯ ಬಗ್ಗೆ ನಿಜವಾದ ಬದ್ಧತೆ ಇದ್ದಿದ್ದರೆ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳಿಂದ ಬೇರ್ಪಡಿಸಿ ಸ್ವತಂತ್ರವಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕಾಗಿತ್ತು ಎಂದು ಮೇಟಿ ಆಗ್ರಹಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕಾಂಗ್ರೆಸ್ ಪ್ರಚಾರ ಸಮಿತಿ ಬ್ಲಾಕ್ ಅಧ್ಯಕ್ಷರಾದ ನರಸಣ್ಣ ಯಾಕತಪುರ, ಬಸವರಾಜ ಭುಯ್ಯಾ, ಮುಹಮ್ಮದ್ ವಾಜಿದ್, ಭದ್ರಯ್ಯ ಸ್ವಾಮಿ, ಮಂಜುನಾಥ ರೆಡ್ಡಿ, ತುಕಾರಾಮ ಕರಾಟೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.