ಚಿಟಗುಪ್ಪ (ಹುಮನಾಬಾದ್): ಸ್ವಯಂ ಉದ್ಯೋಗದಿಂದ ಮಹಿಳೆಯರು ಸ್ವಾವಲಂಬಿ ಹಾಗೂ ಆರ್ಥಿಕವಾಗಿ ಸದೃಢರಾಗಲು ಸಾಧ್ಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀ ಬಿರಾದಾರ ಹೇಳಿದರು.

ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ನರೇಗಾ ಕಾಮಗಾರಿ ಸ್ಥಳದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು ಕೇವಲ ಮನೆ ಕೆಲಸಕ್ಕೆ ಸೀಮಿತ ಎನ್ನುವ ಕಾಲ ಮರೆಯಾಗಿದೆ. ಮಹಿಳೆಯರು ಕೂಡ ಪುರುಷರಂತೆ ಸಮಾನಾಗಿ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿರುವುದು ಒಳ್ಳೆಯ ಬೆಳವಣಿಗೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ವ್ಯಾಪಾರ, ಕೈಗಾರಿಕೆ ಯಂತಹ ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಡರಾಗಿದ್ದಾರೆ’ ಎಂದರು.

‘ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದೆ. ತಾಯಿ ಮತ್ತು ಮಕ್ಕಳಿಗೆ ಅನುಕೂಲವಾಗಲು ಗ್ರಾಮ ಪಂಚಾಯಿತಿಯಲ್ಲಿ ಕೂಸಿನ ಮನೆ ಸ್ಥಾಪನೆ ಮಾಡಲಾಗಿದೆ. ಕೆಲಸಕ್ಕೆ ಬರುವ ಸಮಯದಲ್ಲಿ ತಮ್ಮ ಮಕ್ಕಳನ್ನು ಕೇಂದ್ರದಲ್ಲಿ ಬಿಟ್ಟು ಬರಬಹುದು’ ಎಂದು ಸಲಹೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನುಸೂಯ ಎಸ್ ಕಡೆಮನಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾಬಾಯಿ, ಸಂತೋಷ ಮುಸ್ತರಿ, ವಿಶ್ವನಾಥ್, ಮಂಜುನಾಥ ಸೇರಿದಂತೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.