ಗುರುವಾರ , ಏಪ್ರಿಲ್ 22, 2021
30 °C
ಬಂಡೆಪ್ಪ ಕಾಶೆಂಪೂರ ಕಾರ್ಯಕರ್ತರಿಗೆ ಮನವಿ

ಜೆಡಿಎಸ್‌ ಅಭ್ಯರ್ಥಿ ಗೆಲ್ಲಿಸಿ: ಕಾರ್ಯಕರ್ತರಿಗೆ ಬಂಡೆಪ್ಪ ಕಾಶೆಂಪೂರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಶಾಸಕ ಬಂಡೆಪ್ಪ ಕಾಶೆಂಪೂರ ಮನವಿ ಮಾಡಿದರು.

ಓಲ್ಡ್‌ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಸಮೀಪಿಸುತ್ತಿದೆ. ಪಕ್ಷದ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಪಾಲ್ಗೊಂಡು ಅಭ್ಯರ್ಥಿಗೆ ಬೆಂಬಲ ನೀಡಬೇಕು. ಮತದಾರರಿಗೆ ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಯೋಜನೆಗಳ ಮನವರಿಕೆ ಮಾಡಬೇಕು ಎಂದು ತಿಳಿಸಿದರು

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಾಪೂರ, ತಾಲ್ಲೂಕು ಘಟಕದ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು