ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಪಡೆ ಮಾದರಿಯಲ್ಲಿ ಕಾರ್ಯನಿರ್ವಹಿಸಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸಲಹೆ
Last Updated 13 ಆಗಸ್ಟ್ 2020, 15:40 IST
ಅಕ್ಷರ ಗಾತ್ರ

ಬೀದರ್‌: ‘ಕಾರ್ಯಪಡೆ ಮಾದರಿಯ ಚಟುವಟಿಕೆ ಮತ್ತು ಸಂಘಟಿತ ಪ್ರಯತ್ನ ನಡೆಸಿದಲ್ಲಿ ಕೋವಿಡ್-19 ನಿರ್ವಹಣೆಯು ಇನ್ನೂ ಸರಳವಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

‘ಕೋವಿಡ್‌ ಆಸ್ಪತ್ರೆಯಲ್ಲಿ ಈಗಾಗಲೇ 61 ವೆಂಟಿಲೇಟರ್‌ ಹಾಗೂ ಅಗತ್ಯಕ್ಕೆ ತಕ್ಕಂತೆ ಐಸಿಯು ಉತ್ತಮ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಆಗಸ್ಟ್ 12ರವರೆಗೆ ದೃಢಪಟ್ಟ 3151 ಕೋವಿಡ್ ಸೋಂಕಿತ ಪ್ರಕರಣಗಳ ಪೈಕಿ 2182 ಜನರು ಗುಣಮುಖರಾಗಿದ್ದಾರೆ. 55,157 ಜನರ ಗಂಟಲು ದ್ರವ ನಡೆಸಿದವರ ಪೈಕಿ 51,288 ಜನರ ವರದಿ ನೆಗಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಮಾಹಿತಿ ನೀಡಿದರು.

‘15 ಹೈಫ್ಲೋ ಆಕ್ಸಿಜೆನ್ ಯಂತ್ರಗಳನ್ನು ಅಳವಡಿಸಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಳೆಯ ಬೋಧಕ ಆಸ್ಪತ್ರೆಯ ಕಟ್ಟಡವನ್ನು ಅವಶ್ಯಕತೆಯನುಸಾರ ನವೀಕರಣಗೊಳಿಸಿ, ಸಂಪೂರ್ಣ ಕೋವಿಡ್ 19 ಆಸ್ಪತ್ರೆಯನ್ನಾಗಿ ಮಾರ್ಪಾಟು ಮಾಡಲಾಗುತ್ತಿದೆ’ ಎಂದು ತಿಳಿಸಿದರು.

‘ಕೋವಿಡ್ ಸೋಂಕಿತರಿಗೆ ಬ್ರಿಮ್ಸ್‌ನಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ. ಕೋವಿಡ್ ಕೇರ್ ಸೆಂಟರನಲ್ಲಿರುವವರಿಗೆ ಉತ್ತಮ ರೀತಿಯ ಆಹಾರ ಮತ್ತು ಚಿಕಿತ್ಸೆ ಲಭ್ಯವಾಗುತ್ತಿದೆ ಎನ್ನುವ ಮಾಹಿತಿ ಜನತೆಗೆ ತಿಳಿಸಿ ಚಿಕಿತ್ಸೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುವಂತೆ ಮಾಡಬೇಕು’ ಎಂದು ಉಸ್ತುವಾರಿ ಕಾರ್ಯದರ್ಶಿ ಸಲಹೆ ಮಾಡಿದರು.

ಡಿಎಚ್‌ಓ ಅವರಿಗೆ ಸೂಚನೆ: ‘ಇನ್ನು ಅಗತ್ಯವಿರುವ ಕಡೆಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಕೆಲಸ ಹಂಚಿಕೆ ಮಾಡಿ ಎಲ್ಲ ಕಾರ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಡಿಎಚ್‌ಒ ಅವರಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಕೋವಿಡ್-19ರ ಸ್ಥಿತಿಗತಿಯ ಬಗ್ಗೆ ತಾಲ್ಲೂಕು ವಾರು ಮಾಹಿತಿ ಪಡೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್‌ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭಂವರಸಿಂಗ್ ಮೀನಾ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಜಿಲ್ಲಾ ಕಣ್ಗಾವಲು ಘಟಕದ ಅಧಿಕಾರಿ ಡಾ.ಕೃಷ್ಣಾ ರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರತಿಕಾಂತ ಸ್ವಾಮಿ, ವೈದ್ಯಕೀಯ ಅಧೀಕ್ಷಕ ವಿಜಯಕುಮಾರ ಅಂತಪ್ಪನವರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT