ಸೋಮವಾರ, ಜುಲೈ 26, 2021
26 °C
ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ನ್ಯಾಯಾಲಯ, ಅರಣ್ಯ ಇಲಾಖೆ ಕಚೇರಿಯಲ್ಲಿ ಪರಿಸರ ದಿನಾಚರಣೆ

ಭವಿಷ್ಯದ ಪ್ರಜೆಗಳು ಸ್ಮರಿಸುವಂಥ ಕೆಲಸ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ಪ್ರತಿಯೊಬ್ಬರೂ ಸಸಿಗಳನ್ನು ನೆಟ್ಟು, ಬೆಳೆಸುವ ಮೂಲಕ ಪರಿಸರ ಸಮತೋಲನವನ್ನು ಕಾಪಾಡಬೇಕು. ನಾವು ನಮ್ಮ ಹಿರಿಯರನ್ನು ನೆನೆದಂತೆ, ನಮ್ಮನ್ನು ಕೂಡ ಮುಂದಿನ ಪೀಳಿಗೆ ಸ್ಮರಿಸಬೇಕೆ ಹೊರತು; ದೂರಬಾರದು’‍ ಎಂದು ಜಿಲ್ಲಾಧಿಕಾರಿ ಬಿ.ಶರತ್ ಕಿವಿ ಮಾತು ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಪರಿಸರ ಸಂರಕ್ಷಣೆಯಿಂದ ಶುದ್ಧ ವಾತಾವರಣ ನಿರ್ಮಾಣ ಸಾಧ್ಯ. ಇತ್ತೀಚಿನ ವರ್ಷಗಳಲ್ಲಿ ಮಳೆಯ ಕೊರತೆ ಹೆಚ್ಚಾಗುತ್ತಿದೆ. ಇದಕ್ಕೆ ಮರಗಳ ಹನನವೇ ಕಾರಣ. ಪ್ರತಿಯೊಬ್ಬರು ತಮಗೆ ಜಾಗ ಸಿಕ್ಕಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿದರೆ, ಈ ಆಂದೋಲನ ಬಹಳ ಸುಲಭವಾಗಲಿದೆ’ ಎಂದರು.

ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ್, ಡಿಸಿಪಿ ಕಿಶೋರ್ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ ತುಕಾರಾಂ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ.ವಾನತಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಶರಣಗೌಡ ಪಾಟೀಲ ಹಾಗೂ ಇತರ ಅಧಿಕಾರಿಗಳು ಇದ್ದರು.

ಬಾಲಮಂದಿರದಲ್ಲಿ ಸಸಿ ನೆಡುವ ಕಾರ್ಯಕ್ರಮ: ನಗರದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದ ಸರ್ಕಾರಿ ವೀಕ್ಷಣಾಲಯ ಮತ್ತು ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರದಲ್ಲಿ ಶುಕ್ರವಾರ ವಿಶ್ವ ಪರಿಸರ ದಿನ ಆಚರಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೋಮತಿ ರಾಘವೇಂದ್ರ ಅವರು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭೀಮರಾಯ ಕಣ್ಣೂರ, ಭೀಮಬಾಯಿ, ಬಾಲಕಿಯರ ಬಾಲ ಮಂದಿರದ ಅಧೀಕ್ಷಕಿ ನಾಗಮಣಿ, ಸರ್ಕಾರಿ ಬುದ್ಧಿಮಾಂದ್ಯ ಬಾಲಕಿಯರ ಬಾಲಮಂದಿರದ ಅಧೀಕ್ಷಕ ಚಂದ್ರಕಾಂತ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ ಹಾಗೂ ಸಿಬ್ಬಂದಿ ಇದ್ದರು.

ನ್ಯಾಯಾಲಯದ ಆವರಣ:‌ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ, 101 ಸಸಿ ನೆಡುವ ಕಾರ್ಯಕ್ರಮ ಆರಂಭಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಕೆ. ತಾಳಿಕೋಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗೋಮತಿ ರಾಘವೇಂದ್ರ, ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ ಕಿಣ್ಣಿ, ರಾಜ್ಯ ವಕೀಲರ ಪರಿಷತ್ ಸದಸ್ಯ ಮೋತಕಪಲ್ಲಿ, ಎಲ್ಲ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು, ಮುಖ್ಯ ಆಡಳಿತಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.