ಹುಲಸೂರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಕಿಡ್ನಿ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕಿಡ್ನಿಯ ಆರೋಗ್ಯದ ಮಹತ್ವ ಹಾಗೂ ಅದನ್ನು ಕಾಪಾಡಿಕೊಳ್ಳುವ ಕುರಿತು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮಾಹಿತಿ ನೀಡಿದರು.

ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಾಂತ ಕಾನ್ನಡೆ ಮಾತನಾಡಿ, ‘ಕಿಡ್ನಿ ಮಾನವ ದೇಹದ ಅತ್ಯಂತ ಪ್ರಮುಖ ಅಂಗವಾಗಿದ್ದು, ಅದರ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು, ನಿಯಮಿತ ವ್ಯಾಯಾಮ ಮಾಡುವುದು ಅಗತ್ಯ ಎಂದು ತಿಳಿಸಿದರು.

ಕಿಡ್ನಿ ಕಾಯಿಲೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಆದ್ದರಿಂದ ಜನರು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸಲಹೆ ನೀಡಿದರು.

ಈ ವೇಳೆ ಕಿಡ್ನಿ ರೋಗಗಳ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಹುಮ್ನಾಬಾದೆ, ಸಂತೋಷ ಕಾಳ್ಳೆ, ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳಾದ ಪ್ರಣಾಮ, ಸಚಿನ್, ಶಿವಶಾಂತ, ರೋಹಿತ ಸೇರಿದಂತೆ ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.