ಬೀದರ್: ‘ಯಾವುದೇ ರೀತಿಯ ಸಮಸ್ಯೆಗೆ ಒಳಗಾದರೆ ಆಪ್ತ ಸಮಾಲೋಚಕರು, ಮನೋವೈದ್ಯರ ಮೂಲಕ ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ’ ಎಂದು ಹಿರಿಯ ಸಿವಿಲ್ ನ್ಯಾಯಧೀಶರೂ ಆದ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಘಟಕ ಹಾಗೂ ಸಪ್ತಗಿರಿ ವಿಜ್ಞಾನ ಪದವಿ ಪೊರ್ವ ಕಾಲೇಜು ಸಹಯೋಗದೊಂದಿಗೆ ನಗರದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿಶೇಷವಾಗಿ ವಿದ್ಯಾರ್ಥಿಗಳು ಯಾವುದೇ ತರಹದ ಸಮಸ್ಯೆ ಬಂದರೆ ಮನೋವೈದ್ಯರ ಸಲಹೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಪ್ತಗಿರಿ ವಿಜ್ಞಾನ ಪದವಿ ಪೊರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಡಿ. ತಾಂದಳೆ, ವಿದ್ಯಾರ್ಥಿಗಳು ಪರೀಕ್ಷೆ ಬಂದಾಗ ಒತ್ತಡಕ್ಕೆ ಒಳಗಾಗಬಾರದು. ತಾಳ್ಮೆ ಶಕ್ತಿ ಬಹಳ ಮುಖ್ಯ ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಕಿರಣ ಎಮ್. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಸಮಸ್ಯೆಗಳಿಗೆ ಒಳಗಾದಾಗ ಟೋಲ್ ಫ್ರೀ ನಂಬರ್ 14416 ಗೆ ಕರೆ ಮಾಡಿ ಸಲಹೆ ಪಡೆದುಕೊಳ್ಳಬಹುದು. ಯಾವಾಗಲೂ ಧನಾತ್ಮಕ ಯೋಚನೆ ಮಾಡಬೇಕೆಂದು ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ವೈದ್ಯರಾದ ಡಾ. ಅಮಲ್ ಶರೀಫ್ ಮಾತನಾಡಿ, ಅತಿಯಾದ ಮೊಬೈಲ್ ಹಾಗೂ ಅಂತರ್ಜಾಲದಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದ ಅವರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಗೆ ಒಳಗಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಸೂಕ್ತ ಮಾಹಿತಿ, ಸಲಹೆ, ಆಪ್ತ ಸಮಾಲೋಚನೆ, ಚಿಕಿತ್ಸೆ ಪಡೆದುಕೊಂಡರೆ ಅದರಿಂದ ಹೊರಬರಬಹುದು ಎಂದು ಹೇಳಿದರು.

ಹಿರಿಯ ಆರೋಗ್ಯ ನಿರಿಕ್ಷಣಾಧಿಕಾರಿ ವೀರಶೆಟ್ಟಿ ಚನಶೆಟ್ಟಿ, ಜಿಲ್ಲಾ ಮಾನಸಿಕ ವಿಭಾಗದ ಮಲ್ಲಿಕಾರ್ಜುನ ಗುಡ್ಡೆ, ಆಪ್ತ ಸಮಾಲೋಚಕಿ ರೇಣುಕಾ, ಉಪನ್ಯಾಸಕ ಅನಿಲಕುಮಾರ ಜಾಧವ, ಸಿಮಪ್ಪ ಸರಕೂರೆ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.