ಮಂಗಳವಾರ, ಅಕ್ಟೋಬರ್ 26, 2021
20 °C

ಬೀದರ್‌: ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಹಿರಿಯ ನಾಗರಿಕರ ಅನುಕೂಲಕ್ಕಾಗಿಯೇ ಹಿರಿಯ ನಾಗರಿಕರ ಪಾಲಕರ ಪೋಷಣೆ ಹಾಗೂ ಸಂರಕ್ಷಣೆ ಕಾಯ್ದೆ-2007 ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ಸಿದ್ರಾಮ ಟಿ.ಪಿ. ಹೇಳಿದರು.

ಇಲ್ಲಿಯ ಜಿಲ್ಲಾ ಬಾಲಭವನ ಸಭಾಗಂಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕಣ ಅಧಿಕಾರಿ ಜಗದೀಶ ಕೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಒತಿ ಶರಣಪ್ಪ, ಔರಾದ್‌ನ ರಮಾಬಾಯಿ ಅಂಬೇಡ್ಕರ್ ವೃದ್ಧಾಶ್ರಮದ ಅಧ್ಯಕ್ಷೆ ಪಾರಮ್ಮ, ಮದರ್ ತೆರೆಸಾ ವೃದ್ಧಾಶ್ರಮದ ಅಧ್ಯಕ್ಷ ರವಿ ಜೋಸೆಫ್, ಜೋತಿಭಾ ಫುಲೆ ವೃದ್ಧಾಶ್ರಮದ ಮೈಕಲ್, ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಅಧ್ಯಕ್ಷ ಸಂತೋಷ ಭಾಲ್ಕೆ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಅಧ್ಯಕ್ಷ ಹಾಗೂ ಜಯ ಹಿಂದ್ ಹಿರಿಯ ನಾಗರಿಕರ ಸಂಘದ ಗೌರವ ಅಧ್ಯಕ್ಷ ದೇವೇಂದ್ರ ಕಮಲ್ ಪಾಲ್ಗೊಂಡಿದ್ದರು.

ವೀರಭದ್ರಪ್ಪ ಉಪ್ಪಿನ ಹಾಗೂ ರಾಜೇಂದ್ರ ಸಿಂಗ್ ಪವಾರ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ರೇಣುಕಾ ನಿರೂಪಿಸಿದರು. ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು