ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ತಂಬಾಕು ರಹಿತ ದಿನ ಆಚರಣೆ: ಜಾಗೃತಿ ಜಾಥಾ

Last Updated 31 ಮೇ 2022, 14:26 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಶಿಕ್ಷಣ ಸಂವಹನ ವಿಭಾಗ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ‘ತಂಬಾಕು ಪರಿಸರಕ್ಕೆ ಮಾರಕ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಆರೋಗ್ಯ ಇಲಾಖೆ ಕಚೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರತಿಕಾಂತ ಸ್ವಾಮಿ ಜಾಥಾಕ್ಕೆ ಚಾಲನೆ ನೀಡಿದರು.

ಡಿಎಚ್‌ಒ ಕಚೇರಿಯಿಂದ ಆರಂಭವಾದ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರಕ್ಕೆ ಬಂದು ಮುಕ್ತಾಯವಾಯಿತು. ಮೆರವಣಿಗೆ ಮಾರ್ಗದಲ್ಲಿ ಕರಪತ್ರ ವಿತರಿಸಲಾಯಿತು.

ಎಸ್.ಬಿ. ಪಾಟೀಲ ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಜಿಲ್ಲಾ ನರ್ಸಿಂಗ್ ಕಾಲೇಜು ವಿಧ್ಯಾರ್ಥಿನಿಯರು, ಹೀರಾಲಾಲ್ ಪನ್ನಾಲಾಲ್ ಪ್ರೌಢಶಾಲೆ, ಪರಿಮಳ ಪ್ರೌಢಶಾಲೆ, ಸಾಯಿ ಆದರ್ಶ ಪ್ರೌಢಶಾಲೆ, ವಿದ್ಯಾರಣ್ಯ ಪ್ರೌಢಶಾಲೆ, ಆರ್.ಎಸ್. ಬಲ್ಲೂರ ಪ್ರೌಢಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಂತರ 100 ಹಾಸಿಗೆಗಳ ತಾಯಿ ಮಕ್ಕಳ ಆರೈಕೆ ಆಸ್ಪತ್ರೆಯಲ್ಲಿ ಬಾಯಿ, ಗಂಟಲು ಹಾಗೂ ದಂತ ತಪಾಸಣೆ ಶಿಬಿರ ನಡೆಯಿತು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಂಕ್ರೆಪ್ಪ ಬೊಮ್ಮಾ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶರಣಯ್ಯ ಸ್ವಾಮಿ, ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸಂಜುಕುಮಾರ ಪಾಟೀಲ, ಎಸ್.ಬಿ.ಪಾಟೀಲ, ದಂತ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಶೈಲೇಂದ್ರ ಮಾಶಾಳಕರ್, ಡಾ.ಮಹ್ಮದ್ ಸೋಹೆಲ್, ಆರೋಗ್ಯ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಸಂಗೀತಾಬಾಯಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಬಿರಾದರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೌನದಾಸ, ತಂಬಾಕು ನಿಯಂತ್ರಣ ಸಂಯೋಜಕ ಪ್ರಕಾಶ, ತಂಬಾಕು ಕಾರ್ಯಕ್ರಮ ಸಮಾಜ ಕಾರ್ಯಕರ್ತ ಮಹೇಶ, ಸತೀಶ ಕುಮಾರ ಬಿರಾದರ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT