ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ಆತ್ಮವಿಶ್ವಾಸದಿಂದ ವಾರ್ಷಿಕ ಪರೀಕ್ಷೆ ಬರೆಯಿರಿ: ಡಿಡಿಪಿಯು ಕಿವಿಮಾತು

Last Updated 14 ಏಪ್ರಿಲ್ 2022, 13:23 IST
ಅಕ್ಷರ ಗಾತ್ರ

ಬೀದರ್: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಾರ್ಷಿಕ ಪರೀಕ್ಷೆ ಬರೆಯಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ಆಂಜನೇಯ ಕಿವಿಮಾತು ಹೇಳಿದರು.

ನಗರದ ಚಂದ್ರಪ್ಪ ಗೌರಶೆಟ್ಟಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರೀಕ್ಷೆ ಆರಂಭವಾಗಲು ಇನ್ನೂ ಒಂದು ವಾರ ಬಾಕಿ ಇದೆ. ಇರುವ ಸಮಯವನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಶ್ರದ್ಧೆಯಿಂದ ಎಲ್ಲ ವಿಷಯಗಳ ಪಠ್ಯಕ್ರಮ ಪುನರಾವರ್ತನೆ ಮಾಡಬೇಕು ಎಂದು ತಿಳಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗಿದೆ. ಈ ವರ್ಷ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಒಳ್ಳೆಯ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಮಾಣಿಕರಾವ್ ಪಂಚಾಳ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಭವಿಷ್ಯ ಉಜ್ವಲಗೊಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ ಮಾತನಾಡಿ, ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬೇಕು ಕುತೂಹಲದಿಂದ, ಕಷ್ಟಪಟ್ಟು ವ್ಯಾಸಂಗ ಮಾಡಬೇಕು. ಜೀವನದಲ್ಲಿ ಏನಾದರೂ ಸಾಧಿಸುವ ಗುರಿ ಹೊಂದಬೇಕು ಎಂದು ಸಲಹೆ ಮಾಡಿದರು.

ರಾಜ್ಯಶಾಸ್ತ್ರ ಉಪನ್ಯಾಸಕ ವೀರಣ್ಣ ಕೆ. ಅವರಿಗೆ ಆದರ್ಶ ಉಪನ್ಯಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉಪನ್ಯಾಸಕರಾದ ರಮೇಶಕುಮಾರ ಪಾಟೀಲ ಚಟ್ನಳ್ಳಿ, ಎಸ್.ಎಂ. ಐನಾಪುರ, ಎಸ್.ಕೆ. ಸಾಥಿ, ವಿಜಯಕುಮಾರ ಲಕ್ಕಾ, ನಾಗನಾಥ ಕೊಳ್ಳಾ, ಈಶ್ವರ ರೆಡ್ಡಿ, ಅಂಜಮ್ಮ, ಚಂದ್ರಕಲಾ, ಮಯೂರಿ ಇದ್ದರು. ಬಸವರಾಜ ಹೆಗ್ಗೆ ಸ್ವಾಗತಿಸಿದರು. ಗೌತಮ ಭೋಸ್ಲೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT