ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಯೋಜನೆಗಳಿಗೆ ಯಡಿಯೂರಪ್ಪ ಹೆಸರು

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುವಾಲಿ ಹೇಳಿಕೆ
Last Updated 5 ಜನವರಿ 2021, 15:39 IST
ಅಕ್ಷರ ಗಾತ್ರ

ಬೀದರ್: ನಗರಕ್ಕೆ ಹೊಂದಿಕೊಂಡ ಗೋರನಳ್ಳಿ(ಬಿ) ಗ್ರಾಮದ ಸಮೀಪದ ಜಮೀನಿನಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಎರಡು ವಸತಿ ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಹೇಳಿದರು.

ಗೋರನಳ್ಳಿ(ಬಿ)ಯ ಸರ್ವೇ ಸಂಖ್ಯೆ 22/2ರ 14 ಎಕರೆ 35 ಗುಂಟೆ ಜಮೀನಿನಲ್ಲಿ ಮೊದಲ ಹಂತದಲ್ಲಿ ವಸತಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ಯೋಜನೆಯಿಂದ ಬರುವ ಆದಾಯದಲ್ಲಿ ಸರ್ವೇ ಸಂಖ್ಯೆ 21/1 ರ 17 ಎಕರೆ 20 ಗುಂಟೆ ಜಮೀನಿನಲ್ಲಿ ಎರಡನೇ ಹಂತದ ಯೋಜನೆ ಕಾರ್ಯಗತಗೊಳಿಸಲಾಗುವುದು ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸದ್ಯ ಚಾಲ್ತಿಯಲ್ಲಿ ಇರುವ ಬೀದರ್‌ನ ಸ್ಥಳೀಯ ಯೋಜನಾ ಪ್ರದೇಶದ ಮಹಾ ಯೋಜನೆಯು ಫೆಬ್ರುವರಿ 21ಕ್ಕೆ ಮುಕ್ತಾಯಗೊಳ್ಳಲಿದೆ. ಹೊಸ ಪರಿಷ್ಕೃತ ಯೋಜನೆ ಅನುಮೋದನೆಗೆ ವಿಳಂಬವಾಗುವ ಸಾಧ್ಯತೆ ಇರುವ ಕಾರಣ ಮಹಾ ಯೋಜನೆ 2021 (ಪರಿಷ್ಕೃತ)ರ ಅವಧಿಯನ್ನು ಎರಡು ವರ್ಷ ವಿಸ್ತರಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಾಧಿಕಾರಕ್ಕೆ ಮಾಸಿಕ ಆದಾಯ ಬರುವಂತೆ ನಗರದ ಮಧ್ಯ ಭಾಗದಲ್ಲಿ ಖಾಸಗಿ ಬಡಾವಣೆಗಳಲ್ಲಿ ಕಾಯ್ದಿರಿಸಿದ ಸೂಕ್ತ ನಾಗರಿಕ ಸೌಲಭ್ಯ ಸಿಎ ನಿವೇಶನಗಳಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಪ್ರಾಧಿಕಾರದಿಂದ ಅನುಮೋದನೆಗೊಂಡ ವಿನ್ಯಾಸದ ಉದ್ಯಾನಗಳು ಹಾಗೂ ನಾಗರಿಕ ಸೌಲಭ್ಯ ನಿವೇಶನಗಳಲ್ಲಿನ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹಿಂದೆ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಲು ನೀಡಿರುವ ಅನುಮೋದಿತ ಕರಡು ವಿನ್ಯಾಸಗಳಲ್ಲಿ ನಿಯಮ ಬಾಹೀರವಾಗಿ ಸ್ಥಳೀಯ ಸಂಸ್ಥೆಯಿಂದ ಖಾತೆ ಪಡೆದು, ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಲಾದ ನಿವೇಶನ/ವಿನ್ಯಾಸಗಳ ಮಾಲೀಕರ ವಿರುದ್ಧ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆಯ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಭೂಮಿ ಪರಿವರ್ತನೆ ಮಾಡದೆ, ಪ್ರಾಧಿಕಾರದಿಂದ ವಿನ್ಯಾಸ ಅನುಮೋದನೆ ಪಡೆಯದೆ, ಕೃಷಿ ವಲಯಕ್ಕಾಗಿ ಕಾಯ್ದಿರಿಸಲಾದ ಜಮೀನುಗಳಲ್ಲಿ ಸ್ಥಳೀಯ ಸಂಸ್ಥೆಯಿಂದ ನಿಯಮ ಬಾಹೀರವಾಗಿ ಖಾತೆ/ಮುಟೇಶನ್ ಮಾಡಿಸಿ ನೋಂದಣಿ ಮಾಡುತ್ತಿರುವ ಪ್ರಾಧಿಕಾರ ವ್ಯಾಪ್ತಿಗೆ ಒಳಪಡುವ ಅನಧಿಕೃತ ಬಡಾವಣೆಗಳನ್ನು ತಡೆಗಟ್ಟಲಾಗುವುದು ಎಂದು ತಿಳಿಸಿದರು.

ಪ್ರಾಧಿಕಾರದಿಂದ ನಗರ ಸರಹದ್ದುಗಳಿಗೆ ಸ್ವಾಗತ ಕಮಾನುಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT