ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಗಳೊಂದಿಗೆ ಯೋಧ ರಾಮದಾಸ ಅಂತ್ಯಕ್ರಿಯೆ

Last Updated 28 ಸೆಪ್ಟೆಂಬರ್ 2022, 5:26 IST
ಅಕ್ಷರ ಗಾತ್ರ

ಕಮಲನಗರ:ಜಮ್ಮು ಕಾಶ್ಮಿರದ ಗುರೆಜ್‌ ಕಣಿವೆಯಲ್ಲಿ ಆಮ್ಲಜನಕದ ಕೊರತೆಯಿಂದ ಮೃತಪಟ್ಟಿದ್ದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧ ರಾಮದಾಸ ಧನರಾಜ ಚಂದಾಪುರೆ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಬೆಡಕುಂದಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಡಕುಂದಾ ಗ್ರಾಮದಲ್ಲಿ ಬೆಳಿಗ್ಗೆ 8ಕ್ಕೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. 10ಕ್ಕೆ ಅಲಂಕೃತ ವಾಹನದಲ್ಲಿ ಪಾರ್ಥಿ ವ ಶರೀರ ಇಟ್ಟುಸಂಗಮ–ಔರಾದ್ ರಸ್ತೆ ಮೂಲಕ ಠಾಣಾಕುಶನೂರು ಹಾಗೂ ಬೆಡಕುಂದಾದ ಲಕ್ಷ್ಮಿನಗರದವರೆಗೆ ಮೆರವಣಿಗೆ ಮಾಡಲಾಯಿತು. ಯುವಕರು ಬೈಕ್ ರ‍್ಯಾಲಿ ನಡೆಸಿದರು. ಸರ್ಕಾರದ ಪರವಾಗಿ ಪಶು ಸಂಗೋಪನೆ ಸಚಿವ ಪ್ರಭು ಚವಾಣ್‌ ಹೂಗುಚ್ಛ ಇರಿಸಿ ನಮನ ಸಲ್ಲಿಸಿದರು.

11.45ಕ್ಕೆ ಲಕ್ಷ್ಮಿ ನಗರದ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ಪೊಲೀಸರು ಮೂರು ಸುತ್ತು ಗುಂಡು ಹಾರಿಸಿದರು.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಬೆಡಕುಂದಾ ಗ್ರಾಮದಲ್ಲಿ ಯೋಧ ರಾಮದಾಸ ಚಂದಾಪುರೆ ಅವರ ಸ್ಮಾರಕ ನಿರ್ಮಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು. ಸಚಿವ ಪ್ರಭು ಚವಾಣ್‌ ಮಾತನಾಡಿ,‘ರಾಮದಾಸ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸೌಕರ್ಯಗಳನ್ನು ಒದಗಿಸಲಾಗುವುದು. ನಿವೇಶನ ಒದಗಿಸಿದರೆ ಸ್ಮಾರಕ ನಿರ್ಮಿಸಲಾಗುವುದು. ಅವರ ಮಗುವಿನ ಶಿಕ್ಷಣ ಸೇರಿದಂತೆ ಇತರ ವೆಚ್ಚಗಳನ್ನು ಭರಿಸಲಾಗುವುದು’ ಎಂದು ಹೇಳಿದರು.

ತಹಶೀಲ್ದಾರ್‌ ರಮೇಶಕುಮಾರ ಪೆದ್ದೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಸಚಿನ್ ರಾಠೋಡ ಹಾಗೂ ಗಿರೀಶ ವಡೆಯರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT