ಬೀದರ್: ನೆಹರೂ ಯುವ ಕೇಂದ್ರವು ಇಂಡಿಯಾ@2047 ಯುವ ಸಂವಾದ ಆಯೋಜನೆಗೆ ಸಮುದಾಯ ಅಭಿವೃದ್ಧಿ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರತ್ಯೇಕ ಕಾರ್ಯಕ್ರಮ ಆಯೋಜನೆಗೆ ಜಿಲ್ಲೆಯ ಮೂರು ಸಂಸ್ಥೆಗಳನ್ನು ಆಯ್ಕೆ ಮಾಡಲಾಗುವುದು. ಪ್ರತಿ ಕಾರ್ಯಕ್ರಮಕ್ಕೆ ತಲಾ ರೂ. 20 ಸಾವಿರ ಅನುದಾನ ಕೊಡಲಾಗುವುದು ಎಂದು ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ ತಿಳಿಸಿದ್ದಾರೆ.
ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪಂಚ ಪ್ರಾಣ ಮಂತ್ರ ಘೋಷಿಸಿದ್ದಾರೆ. ಅಮೃತ ಕಾಲ ಇಂಡಿಯಾ@2047 ದೃಷ್ಟಿಕೋನ ಜನರ ಮುಂದಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದ ನೆಹರೂ ಯುವ ಕೇಂದ್ರ ಇಂಡಿಯಾ@2047 ಯುವ ಸಂವಾದ ಹಮ್ಮಿಕೊಂಡಿದೆ. ಸಮುದಾಯ ಅಭಿವೃದ್ಧಿ ಆಧಾರಿತ ಸಂಸ್ಥೆಗಳ ಸಹಯೋಗದಲ್ಲಿ ಏಪ್ರಿಲ್ 1 ರಿಂದ ಮೇ 31 ರ ವರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
500ಕ್ಕೂ ಹೆಚ್ಚು ಯುವಕರೊಂದಿಗೆ ಪ್ರಶ್ನೋತ್ತರ ಮೂಲಕ ಸಂವಾದ ನಡೆಸಿ, ಪಂಚ ಪ್ರಾಣ ಯೋಜನೆಯನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷ ಅಲ್ಲದ, ಪಕ್ಷಪಾತ, ಜಾತಿ, ಮತ ಭೇದವಿಲ್ಲದೆ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಉತ್ತಮ ಕಾರ್ಯಕ್ರಮ ಆಯೋಜನೆಗೆ ಶಕ್ತವಾಗಿರುವ ಸಮುದಾಯ ಅಭಿವೃದ್ಧಿ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ಆಸಕ್ತ ಸಂಸ್ಥೆಗಳು ನಗರದ ಮೈಲೂರಿನ ಶಾಸ್ತ್ರಿನಗರದ ಬಿಲಾಲ್ ಮಸೀದಿ ಸಮೀಪದ ನಾಗಪ್ಪ ಗಿರಣಿ ಎದುರಿಗೆ ಇರುವ ನೆಹರೂ ಯುವ ಕೇಂದ್ರದ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8830057471 ಅಥವಾ 9004315246 ಗೆ ಸಂಪಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.