ಸೋಮವಾರ, ಆಗಸ್ಟ್ 2, 2021
19 °C

‘ಯುವಜನತೆ ದೇಶದ ಆಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಯುವಜನತೆ ದೇಶದ ಆಸ್ತಿ. ದುಶ್ಚಟಗಳಿಂದ ದೂರವಿರುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಕಲಬುರ್ಗಿಯ ಚೈತನ್ಯಮಯಿ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ.ಎ.ಎಸ್. ಪಾಟೀಲ ಹೇಳಿದರು.

ಜೈಹಿಂದ ಹಿರಿಯ ನಾಗರಿಕರ ಸಂಘದ ವತಿಯಿಂದ ಗುರುನಾನಕ್ ಕಾಲೊನಿಯಲ್ಲಿರುವ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ‘ಯುವ ಶಕ್ತಿ, ದೇಶದ ಶಕ್ತಿ’ ಕುರಿತು ನಡೆದ ಸಂವಾದದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಂಸ್ಥೆಯ ಕಾರ್ಯದರ್ಶಿ ವೀರಭದ್ರಪ್ಪ ಉಪ್ಪಿನ್ ಮಾತನಾಡಿ, ‘ಕೋವಿಡ್ ತೊಲಗಿದ ನಂತರ ಸಂಘದ ವತಿಯಿಂದ
ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ಉದ್ಯಮಿ ರಾಮಕೃಷ್ಣ ಮುನಿಗ್ಯಾಲ ಅಧ್ಯಕ್ಷತೆ ವಹಿಸಿದ್ದರು. ಶಂಕರ್ ಚಿದ್ರಿ, ಧನರಾಜ್, ಶಿವಕುಮಾರ, ಲಲಿತಾಬಾಯಿ ಮುನಿಗ್ಯಾಲ, ವಿಜಯಲಕ್ಷ್ಮೀ ಸಾವಳೆ, ಶಿಮರಾನ್ ಇದ್ದರು. ಕೋಶಾಧ್ಯಕ್ಷ ಗಂಗಪ್ಪ ಸಾವಳೆ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು