ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಸರ್ಕಾರಿ ಯೋಜನೆಗಳ ಜಾಗೃತಿ ಮೂಡಿಸಿದ ಯುವ ಸಂಸತ್ತು

ಸ್ಥಳದಲ್ಲೇ ಆಯುಷ್ಮಾನ್ ಭಾರತ ಯೋಜನೆ ನೋಂದಣಿ, ಇವಿಎಂ ಪ್ರಾತ್ಯಕ್ಷಿಕೆ
Last Updated 19 ಮಾರ್ಚ್ 2023, 11:17 IST
ಅಕ್ಷರ ಗಾತ್ರ

ಬೀದರ್: ಇಲ್ಲಿಯ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಇರುವ ಗುರುನಾನಕ ಭವನದಲ್ಲಿ ಆಯೋಜಿಸಿದ್ದ ಜಿಲ್ಲಾ ನೆರೆ ಹೊರೆ ಯುವ ಸಂಸತ್ತು ಹಾಗೂ ಭಾರತದ ಜಿ 20 ಸಂಭ್ರಮಾಚರಣೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಜಾಗೃತಿ ಮೂಡಿಸಿತು.

ಸ್ವಚ್ಛ ಭಾರತ ಅಭಿಯಾನ, ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್, ವಸತಿ ಯೋಜನೆ, ವಿಕಲಚೇತನರ ಕಲ್ಯಾಣ ಯೋಜನೆ, ವಿದ್ಯುನ್ಮಾನ ಮತಯಂತ್ರ ಬಳಕೆಯ ಮಾಹಿತಿ ಒದಗಿಸಿತು. ಸ್ಥಳದಲ್ಲೇ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆ ನೋಂದಣಿಗೂ ವೇದಿಕೆ ಕಲ್ಪಿಸಿಕೊಟ್ಟಿತು.

ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಸ್ತುಗಳ ಪ್ರದರ್ಶನಕ್ಕೆ ಒಂಬತ್ತು ಮಳಿಗೆಗಳನ್ನು ಹಾಕಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳು ವಿವಿಧ ಯೋಜನೆಗಳ ವಿವರ ನೀಡಿದರು.

ಜಿಲ್ಲಾ ಪಂಚಾಯಿತಿಯ ಲೆಕ್ಕ ಸಹಾಯಕ ಪ್ರವೀಣ ಸ್ವಾಮಿ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ವಸತಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಜಿಲ್ಲಾ ವ್ಯವಸ್ಥಾಪಕ ಶಿವಶಂಕರ ಬೆಳಮಗಿ ಮಿಷನ್ ಸೌಲಭ್ಯ ಹಾಗೂ ಸೇವೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗರಾಜ ಮಠ ವಿಕಲಚೇತನರ ಯೋಜನೆ ಹಾಗೂ ಭಾರತದ ಜಿ 20 ಶೃಂಗಸಭೆ ಅಧ್ಯಕ್ಷತೆ, ಎನ್‍ಆರ್‍ಎಲ್‍ಎಂ ಜಿಲ್ಲಾ ವ್ಯವಸ್ಥಾಪಕ ಆಕಾಶ ಎನ್‍ಆರ್‍ಎಲ್‍ಎಂ ಮತ್ತು ಸಿರಿಧಾನ್ಯ, ಎನ್‍ಆರ್‍ಎಲ್‍ಎಂ ತಾಲ್ಲೂಕು ಮೇಲ್ವಿಚಾರಕಿ ಸಂಗೀತಾ ಸ್ವಸಹಾಯ ಸಂಘಗಳ ಸೌಲ ಸೌಲಭ್ಯ ಹಾಗೂ ಮಹಿಳಾ ಸಬಲೀಕರಣ ಯೋಜನೆ, ಸಂಪನ್ಮೂಲ ವ್ಯಕ್ತಿ ಡಾ. ಗೌತಮ ಅರಳಿ ಮತದಾನ ಮಹತ್ವ ಹಾಗೂ ಇವಿಎಂ ಬಳಕೆ ಕುರಿತು ಉಪನ್ಯಾಸ ನೀಡಿದರು. ಸಂಚಾರ ಪೊಲೀಸರು ಸಂಚಾರ ನಿಯಮಗಳ ಮಾಹಿತಿ ನೀಡಿದರು.

ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಸ್ವಚ್ಛ ಭಾರತ ಅಭಿಯಾನ ಅಂಗವಾಗಿ ನಡೆಸುತ್ತಿರುವ ಸ್ವಚ್ಛ ಬೀದರ್ ಅಭಿಯಾನದ ಭಿತ್ತಿ ಪತ್ರವನ್ನು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಬಿಡುಗಡೆ ಮಾಡಿದರು. ಲಾವಣಿ, ಜಾನಪದ ನೃತ್ಯ ಸೇರಿದಂತೆ ವಿವಿಧ ಸಾಂಸ್ಕøತಿಕ ಚಟುವಟಿಕೆಗಳು ಎಲ್ಲರ ಮನ ರಂಜಿಸಿದವು.

ಶಾಸಕ ರಹೀಂಖಾನ್, ಡಾ. ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲಸ್ತುವಾರಿ ಸಮಿತಿಯ ಸದಸ್ಯ ಶಿವಯ್ಯ ಸ್ವಾಮಿ, ಗುರುನಾನಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಲಬೀರಸಿಂಗ್, ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಪ್ರಾಚಾರ್ಯೆ ಡಾ. ಶಾಮಲಾ ವಿ. ದತ್ತಾ, ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರಮೆ, ಜಿ.ಎನ್. ಮಠಪತಿ, ಪವನಕುಮಾರ, ಸೋಮನಾಥ ಮತ್ತಿತರರು ಇದ್ದರು.

ನೆಹರು ಯುವ ಕೇಂದ್ರ, ಜಗದ್ಗುರು ಪಂಚಾಚಾರ್ಯ ಯುವಕ ಸಂಘ, ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಹಾಗೂ ಗುರುನಾನಕ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT