ಬೀದರ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ಯೂಟ್ಯೂಬರ್ ಒಬ್ಬರು ಫೇಸ್ಬುಕ್ ಲೈವ್ನಲ್ಲೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

‘ಮೀಡಿಯಾ ಇನ್ ಟ್ರುತ್’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಸಲ್ಮಾನ್ ಖಾನ್ ಆತ್ಮಹತ್ಯೆಗೆ ಯತ್ನಿಸಿದವರು.

‘ನಾನು ಎಲ್ಲ ರೀತಿಯ ವಿಡಿಯೋಗಳನ್ನು ನನ್ನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡುತ್ತೇನೆ. ಎಲ್ಲವೂ ಹಂಚಿಕೊಳ್ಳುತ್ತೇನೆ. ಆದರೆ, ಎಸ್ಪಿ ಕಚೇರಿಯಲ್ಲಿ ಶಾಂತಿ ಸಭೆ ಇದೆ ಎಂದು ಕರೆಯಿಸಿ, ಎಲ್ಲರ ಎದುರು ಹಲ್ಲೆಗೆ ಯತ್ನಿಸಿ, ನನ್ನ ಮಾನ, ಮರ್ಯಾದೆ ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

‘ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಡಿಯೋಗಳನ್ನು ಏಕೆ ಹಾಕುತ್ತಿದ್ದೀಯಾ ಎಂದು ಪ್ರಶ್ನಿಸಿ, ವಿಡಿಯೋ ತೆಗೆದು ಹಾಕಲು ತಾಕೀತು ಮಾಡಿದ್ದಾರೆ. ಎಸ್ಪಿ ಅವರು ನನಗೆ ಬಹಳ ತೊಂದರೆ ನೀಡುತ್ತಿದ್ದಾರೆ.ಮೀಡಿಯಾದವರನ್ನೇ ಇಷ್ಟೊಂದು ಕಿರುಕುಳ ನೀಡುತ್ತಿರುವ ಎಸ್ಪಿ ಸಾಮಾನ್ಯ ಜನರಿಗೆ ಎಷ್ಟು ತೊಂದರೆ ನೀಡುತ್ತಿರಬಹುದು. ಎಸ್ಪಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ನನ್ನ ಜೀವ ತೆಗೆಯುವ ಸಾಧ್ಯತೆ ಇದೆ ಎಂದೂ ಆರೋಪಿಸಿದ್ದಾರೆ.

ಸಲ್ಮಾನ್ ಖಾನ್ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೊತ್ತಾಗಿದೆ.

ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರನ್ನು ‘ಪ್ರಜಾವಾಣಿ’ ಸಂಪರ್ಕಿಸಿದಾಗ ಅವರು ಮಾಹಿತಿಗೆ ಲಭ್ಯರಾಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.