ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಸೌರಭ ಕಾರ್ಯಕ್ರಮ ನಾಳೆ

Last Updated 4 ನವೆಂಬರ್ 2022, 15:25 IST
ಅಕ್ಷರ ಗಾತ್ರ

ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೀದರ್ ತಾಲ್ಲೂಕಿನ ಘೋಡಂಪಳ್ಳಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ನ. 5 ರಂದು ಬೆಳಿಗ್ಗೆ 11ಕ್ಕೆ ಯುವ ಸೌರಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸುವರು. ಕೇಂದ್ರದ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಘನ ಉಪಸ್ಥಿತಿ ವಹಿಸುವರು. ಶಾಸಕ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆ ವಹಿಸುವರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ರಹೀಂಖಾನ್, ಶರಣು ಸಲಗರ್, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ, ಶಶೀಲ್ ನಮೋಶಿ, ಭೀಮರಾವ್ ಪಾಟೀಲ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೊದ್ದಿನ್ ಕಚೇರಿವಾಲೆ, ರಾಜ್ಯ ಮರಾಠ ನಿಗಮದ ಅಧ್ಯಕ್ಷ ಎಂ.ಜಿ. ಮುಳೆ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ಅಣ್ಣಾರಾವ್ ಪಾಟೀಲ, ಬಿಡಿಎ ಅಧ್ಯಕ್ಷ ಬಾಬುವಾಲಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಬುರಗಿಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಗಿರೀಶ್ ರಂಜೋಳಕರ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದ್, ಪ್ರಾಚಾರ್ಯ ಶರಣಪ್ಪ ಬಿರಾದಾರ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದಾರ, ಬೀದರ್ ಗ್ರಾಮೀಣ ಠಾಣೆ ಪಿಎಸ್‍ಐ ಸುವರ್ಣಾ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ, ನಾಗೋರಾ ಪಿಡಿಒ ಗಾಯತ್ರಿದೇವಿ ಹೊಸಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವಚನ ಗಾಯನ, ಜನಪದ ಗೀತೆ, ಕಂಸಾಳೆ, ತಮಟೆ, ಸಮೂಹ ನೃತ್ಯ, ನಾಟಕ ಪ್ರದರ್ಶನಗೊಳ್ಳಲಿವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT