ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್‌ ತೀರ್ಮಾನ: ಜಮೀರ್‌ ಅಹಮ್ಮದ್‌ ಖಾನ್‌

Published 24 ಜೂನ್ 2024, 11:32 IST
Last Updated 24 ಜೂನ್ 2024, 11:32 IST
ಅಕ್ಷರ ಗಾತ್ರ

ಬೀದರ್‌: ‘ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವುದರ ಬಗ್ಗೆ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ’ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್‌. ಜಮೀರ್‌ ಅಹಮ್ಮದ್‌ ಖಾನ್‌ ತಿಳಿಸಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಸಹಕಾರ ಸಚಿವ ಎನ್‌. ರಾಜಣ್ಣ ಅವರು ಡಿಸಿಎಂ ಹುದ್ದೆ ಸೃಷ್ಟಿಸುವುದರ ಬಗ್ಗೆ ಅವರ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳಿದ್ದಾರೆ. ನಾನು ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್‌ ಕೂಡ ನಮ್ಮ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಆದರೆ, ಅಂತಿಮವಾಗಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗಿರುವುದು ಪಕ್ಷದ ಹೈಕಮಾಂಡ್‌ ಎಂದು ನಗರದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT