ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾಲ್ಕಿ: ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ

Published : 14 ಆಗಸ್ಟ್ 2024, 15:44 IST
Last Updated : 14 ಆಗಸ್ಟ್ 2024, 15:44 IST
ಫಾಲೋ ಮಾಡಿ
Comments

ಭಾಲ್ಕಿ: ತಾಲ್ಲೂಕಿನಲ್ಲಿ ನರೇಗಾದಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ವೀಕ್ಷಿಸಿದರು.

ಕೋಸಂ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಅವರು ನರೇಗಾ ಯೋಜನೆಯಡಿ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ಕಟ್ಟಡ, ಸುತ್ತುಗೋಡೆ ಮತ್ತು ವಿವಿಧೆಡೆ ಪ್ರಗತಿಯಲ್ಲಿರುವ ಸಿಸಿ ರಸ್ತೆ, ಫಾರ್ಮೇಶನ್ ರಸ್ತೆ, ಚರಂಡಿ, ನಮ್ಮ ಹೊಲ ನಮ್ಮ ದಾರಿ ಕಾಮಗಾರಿ, ಚೆಕ್ ಡ್ಯಾಂ ಕಾಮಗಾರಿಗಳನ್ನು ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನರೇಗಾ ಯೋಜನೆಯ ಕಾಮಗಾರಿಗಳು ಗ್ರಾಮೀಣ ಭಾಗದ ಎಲ್ಲ ಹಳ್ಳಿಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ನರೇಗಾ ಯೋಜನೆ ಕಾಮಗಾರಿಗಳನ್ನು ಅನುಷ್ಠಾನ ಮಾಡುವ ಮೂಲಕ ಬಡ ಜನರಿಗೆ, ಮಹಿಳೆಯರಿಗೆ ಹಾಗೂ ಶಾಲಾ ಮಕ್ಕಳ ಅಭಿವೃದ್ಧಿಗೆ ಸರ್ಕಾರ ನೀಡುವ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು. ಪ್ರತಿಯೊಂದು ಕುಟುಂಬಕ್ಕೆ 100 ದಿನ ಕೆಲಸ ನೀಡುವ ಜತೆಗೆ ಗ್ರಾಮದ ಜನರು ವಲಸೆ ಹೋಗದಂತೆ ಸ್ಥಳೀಯವಾಗಿ ನರೇಗಾ ಯೋಜನೆಯಲ್ಲಿ ಕೆಲಸ ನೀಡಬೇಕು’ ಎಂದರು.

ಗ್ರಾಮದಲ್ಲಿ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ರೈತರ ಹೊಲಗಳಿಗೆ ರಸ್ತೆ ನಿರ್ಮಾಣ, ಜಾನುವಾರುಗಳು ಇರುವ ರೈತರು ದನದ ಕೊಟ್ಟಿಗೆ, ಕೋಳಿ ಶೆಡ್, ಕುರಿ ಶೆಡ್, ಹಾಗೂ ಜಮೀನು ಹೊಂದಿರುವ ರೈತರು ಕೃಷಿ ಹೊಂಡ, ಬದು ನಿರ್ಮಾಣ ಮಾಡಿಕೊಂಡು ಆರ್ಥಿಕವಾಗಿ ಸೃದೃಢರಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜೈ ಪ್ರಕಾಶ ಚವ್ಹಾಣ್, ತಾಲ್ಲೂಕು ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಸಹಾಯಕ ನಿರ್ದೇಶಕ ಚಂದ್ರಕಾಂತ ಬನ್ನಾಳೆ, ಅಭಿವೃದ್ಧಿ ಅಧಿಕಾರಿ ರಾಹುಲ್ ದಂಡೆ, ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ, ಗ್ರಾ.ಪಂ ಅಧ್ಯಕ್ಷ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗೆ ಭೇಟಿ: ಇದೇ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು. ವಿವಿಧ ತರಗತಿ ಕೋಣೆಗಳಿಗೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳ ವೀಕ್ಷಣೆ ಜತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಯ ಮಾಹಿತಿ ಪಡೆದು ಕೊಂಡು ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಕೋಸಂ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಸ್ವಾತಂತ್ರೋತ್ಸವ ನಿಮಿತ್ತ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಕೋಸಂ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಸ್ವಾತಂತ್ರೋತ್ಸವ ನಿಮಿತ್ತ ವಿದ್ಯಾರ್ಥಿಗಳು ಬಿಡಿಸಿದ ರಂಗೋಲಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT