ಬುಧವಾರ, ಅಕ್ಟೋಬರ್ 23, 2019
25 °C
ಜಿ.ಪಂ ಸಾಮಾನ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ ಸೂಚನೆ

ವಸತಿ ಯೋಜನೆ ಫಲಾನುಭವಿಗಳಿಗೆ ಬಾಕಿ ಮೊತ್ತ ಪಾವತಿಸಿ

Published:
Updated:
Prajavani

ಬೀದರ್‌: ‘ಕಳೆದ ಸಾಲಿನ ರಾಜೀವ್ ಗಾಂಧಿ ಹಾಗೂ ಅಂಬೇಡ್ಕರ್ ವಸತಿ ಯೋಜನೆ ಫಲಾನುಭವಿಗಳ ಬಾಕಿ ಮೊತ್ತವನ್ನು ಶೀಘ್ರ ಪಾವತಿಸಲು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಲಕ್ಷ್ಮಣರಾವ್‌ ಬುಳ್ಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಬೇಕು’ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳು ಬಂದಿದ್ದು, ಅವುಗಳನ್ನು ಕೂಡಲೇ ಸರಿಪಡಿಸಬೇಕು’ ಎಂದು ತಿಳಿಸಿದರು.

‘ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಈಗಾಗಲೇ 96,960 ಅರ್ಜಿಗಳು ಬಂದಿವೆ. ಜಿಪಿಎಸ್ ಹೊಂದಾಣಿಕೆ ಕಾರ್ಯ ಆರಂಭವಾಗಿದ್ದು, ಶೀಘ್ರವೇ ಮನೆ ಹಂಚಿಕೆ ಮಾಡಲಾಗುವುದು’ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೃಷಿ, ಆರೋಗ್ಯ ಮತ್ತಿತರ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಸಮಿತಿ ಸದಸ್ಯರಾದ ರವೀಂದ್ರ ರೆಡ್ಡಿ ಗುಂಡಾರೆಡ್ಡಿ, ಅಫ್ರೋಜ್ ಖಾನ್, ಆನಂದ ಪಾಟೀಲ, ಬಾಬು ಸಿಂಗ್ ಹಜಾರಿ, ಸುಧೀರಕುಮಾರ ಕಾಡಾದಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗ್ಯಾನೇಂದ್ರಕುಮಾರ ಗಂಗ್ವಾರ್, ಉಪ ಕಾರ್ಯದರ್ಶಿ ಸೂರ್ಯಕಾಂತ ಜೋಜನಾ, ಮುಖ್ಯ ಯೋಜನಾಧಿಕಾರಿ ಕಿಶೋರ ದುಬೆ ಇದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)