ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಣಬೆ ಲಾಭದಾಯಕ ಬೇಸಾಯ

Last Updated 18 ನವೆಂಬರ್ 2017, 6:22 IST
ಅಕ್ಷರ ಗಾತ್ರ

ಔರಾದ್: ‘ಇಲ್ಲಿಯ ಹವಾಮಾನ ಅಣಬೆ ಬೇಸಾಯಕ್ಕೆ ಪೂರಕವಾಗಿದೆ’ ಎಂದು ಕೃಷಿ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಡಾ.ರೇವಣ್ಣ ಹೇಳಿದರು. ತಾಲ್ಲೂಕಿನ ನಾಗೂರ (ಎಂ) ಗ್ರಾಮದಲ್ಲಿ ಗುರುವಾರ ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಅಣಬೆಯಲ್ಲಿ ಪ್ರೋಟಿನ್ ಹೆಚ್ಚಿರುವುದರಿಂದ ಮನುಷ್ಯನ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ. ಇದು ಸಕ್ಕರೆ ಕಾಯಿಲೆ ಮತ್ತು ಮಧುಮೇಹಿಗಳಿಗೆ ಉತ್ತಮ ಆಹಾರವಾಗಲಿದೆ. ಅಣಬೆ ಬೇಸಾಯ ಸರಳವಾಗಿದೆ. ಇದರ ಬೀಜ ಕೂಡ ಕಡಿಮೆ ದರದಲ್ಲಿ ಸಿಗುತ್ತವೆ. ಆದರೆ, ಉತ್ಪನ್ನಕ್ಕೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆ ಇದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಅನೀಲ ಬಿರಾದಾರ ಮಾತನಾಡಿ, ‘ನಮ್ಮ ತಾಲ್ಲೂಕಿನಲ್ಲಿ ತೋಟಗಾರಿಕೆ ಬೆಳೆ ಬೆಳೆಯಲು ಹೆಚ್ಚಿನ ಅವಕಾಶ ಇದೆ. ಈ ನಿಟ್ಟಿನಲ್ಲಿ ರೈತರು ಕಾಳಜಿ ವಹಿಸಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಸದಸ್ಯೆ ಧೊಂಡುಬಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಘಾಳರೆಡ್ಡಿ, ತೋಟಗಾರಿಕೆ ಸಹಾಯಕ ನಿರ್ದೇಶಕ ಮಾರುತಿ, ತೋಟಗಾರಿಕೆ ವಿಜ್ಞಾನಿ ವೀರಭದ್ರಪ್ಪ, ಹರ್ಷದ್‌, ವಿಲಾಸ, ಪ್ರಕಾಶ, ವಕೀಲ ಅಶೋಕ ಮಾನುರೆ, ಶಂಕರರಾವ ಪಾಟೀಲ, ಪ್ರಗತಿಪರ ರೈತ ಸಿದ್ರಾಮ ಮಾನುರೆ ಇದ್ದರು.

ತೋಟಗಾರಿಕೆ ಅಧಿಕಾರಿ ಪ್ರಿಯಾಂಕಾ ಸ್ವಾಗತಿಸಿದರು. ಬಾಲಾಜಿ ನಿರೂಪಿಸಿದರು. ನಾಗೂರ ಮತ್ತು ಸುತ್ತಲಿನ ಗ್ರಾಮಗಳ ರೈತರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT