ಬೀದರ್: ಬಡ, ಅರ್ಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಒತ್ತು ನೀಡುವ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳು ಒತ್ತು ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
2012–13ನೇ ಸಾಲಿನಲ್ಲಿ ಖಾಸಗಿ ಶಾಲೆಗಳ ತಕರಾರು ಮತ್ತು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ಬರಲಿಲ್ಲ. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು.
ಈ ಬಾರಿ ಅಂಥ ಲೋಪ ಆಗದಂತೆ ಎಚ್ಚರವಹಿಸಬೇಕು. ಕಾಯ್ದೆಯ ಅನುಕೂಲಗಳ ಬಗೆಗೆ ವ್ಯಾಪಕ ಪ್ರಚಾರ ನಡೆಸಿ ಜಾಗೃತಿ ಮೂಡಿಸಬೇಕು ಎಂದು ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ರಾಜಕುಮಾರ ಮೂಲಭಾರತಿ, ಶಿವಕುಮಾರ ನೀಲಿಕಟ್ಟಿ ಮತ್ತಿತರರು ಒತ್ತಾಯಿಸಿದ್ದಾರೆ.