ಬಸವಕಲ್ಯಾಣ: ಗೌರವಧನ ಬಿಡುಗಡೆ ಹಾಗೂ ಇತರೆ ಬೇಡಿಕೆಗಳಿಗಾಗಿ ಒತ್ತಾಯಿಸಿ ತಾಲ್ಲೂಕು ಅಂಗನವಾಡಿ ನೌಕರರಿಂದ ಸೋಮವಾರ ಇಲ್ಲಿ ರ‌್ಯಾಲಿ ನಡೆಸಿ ತಹಸೀಲ್ದಾರರಿಗೆ ಮನವಿಪತ್ರ ಸಲ್ಲಿಸಲಾಯಿತು.

ಕಳೆದ 6 ತಿಂಗಳಿಂದ ಗೌರವಧನ ದೊರೆಯದ ಕಾರಣ ನೌಕರರು ತೀವ್ರ ಸಂಕಟ ಅನುಭವಿಸುತ್ತಿದ್ದಾರೆ. ಈ ಸಂಬಂಧ ಹಲವಾರು ಸಲ ಮನವಿ ಮಾಡಿಕೊಂಡರೂ ಪ್ರಯೋಜನ ಆಗಿಲ್ಲ. ಇನ್ನು ಮುಂದಾದರೂ ಶೀಘ್ರ ಹಣವನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ಈಚೆಗೆ ಭಾಗ್ಯಲಕ್ಷ್ಮಿ ಬಾಂಡ್ ಬಿಡುಗಡೆ ಮಾಡದ ಕಾರಣ ಸಮಸ್ಯೆಯಾಗಿದೆ. ಈ ಸಂಬಂಧ ಜನರು ಅಂಗನವಾಡಿ ಕಾರ್ಯಕರ್ತೆಯರಿಗೆ ವಿಚಾರಿುತ್ತಿದ್ದಾರೆ. ಬೇಕೆಂತಲೇ ಕೊಡುತ್ತಿಲ್ಲವೇನೋ ಎನ್ನುವ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಶೀಘ್ರ ಬಾಂಡ್ ವಿತರಿಸುವ ವ್ಯವಸ್ಥೆ ಮಾಡಬೇಕು. ಗೌರವಧನ ಹೆಚ್ಚಿಸಬೇಕು. ಇತರೆ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು ಎಂದೂ ಮನವಿ ಮಾಡಿಕೊಳ್ಳಲಾಗಿದೆ.

ರ‌್ಯಾಲಿ ಅಂಬೇಡ್ಕರ ವೃತ್ತಕ್ಕೆ ಆಗಮಿಸಿದಾಗ ತಹಸೀಲ್ದಾರ ಜಗನ್ನಾಥರೆಡ್ಡಿ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಸರೋಜನಿ ಗಾಯಕವಾಡ, ಕಾರ್ಯದರ್ಶಿ ಶ್ರೀದೇವಿ ಚಿವಡೆ, ಪ್ರಮುಖರಾದ ಜಯಶ್ರೀ ಧನ್ನೂರ್, ಮಂದಾಕಿನಿ ಹುಲಸೂರ, ನಂದಾದೇವಿ, ಶರಣಮ್ಮ ಹಾಗೂ ತಾಲ್ಲೂಕಿನ ಎಲ್ಲ ಅಂಗನವಾಡಿಗಳ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.