ಬೀದರ್: ಗ್ರಾಮೀಣ ಜನ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವತ್ತ ಗಮನ ಹರಿಸಬೇಕು ಎಂದು ಖಾದಿ ಗ್ರಾಮೋದ್ಯೋಗ ಇಲಾಖೆಯ ಉಪನಿರ್ದೇಶಕಿ ಸುರೇಖಾ ಮಳ್ಳಿ ಸಲಹೆ ಮಾಡಿದರು.

ಬೀದರ್ ತಾಲ್ಲೂಕಿನ ರಾಜಗೀರಾ ಧರಿಯಲ್ಲಿ ಮಂಗಳವಾರ ನಡೆದ ಮನ್ನಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಸಣ್ಣ ಹಾಗೂ ಗುಡಿ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆರ್ಥಿಕ ಸಹಾಯ ಕಲ್ಪಿಸುತ್ತಿದೆ. ಇದರ ಪ್ರಯೋಜನ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸದಾನಂದ ಶಿವಯೋಗಿ ಮಹಾರಾಜರು ತಿಳಿಸಿದರು. ಜೀವನದಲ್ಲಿ ಗುರಿ ಇಟ್ಟುಕೊಳ್ಳಬೇಕು. ಅದನ್ನು ಸಾಕಾರಗೊಳಿಸಲು ನಿರಂತರ ಶ್ರಮ ವಹಿಸಬೇಕು ಎಂದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯು ತೊಡಗಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಸೋಮೇಶ್ವರ ಬಿರಾದಾರ್ ಹೇಳಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಸವರಾಜ ಬಿರಾದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಪ್ರೊ. ಮಹೇಶಕುಮಾರ ನಿರೂಪಿಸಿದರು. ಪ್ರೊ. ಗಂಗಾಧರ ಕೋರಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.