ಬುಧವಾರ, ಜನವರಿ 22, 2020
16 °C

ಇಂದು ಶಿವಮೊಗ್ಗಕ್ಕೆ ನಳಿನ್ ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡಿ.17ರಂದು ಶಿವಮೊಗ್ಗಕ್ಕೆ ಭೇಟಿ ನೀಡುವರು. ಅಂದು 8.30ಕ್ಕೆ ಪಕ್ಷದ ಕಚೇರಿಯಲ್ಲಿ ನಡೆಯುವ ಕೋರ್‌ಕಮಿಟಿ ಸಭೆ, 10.30ಕ್ಕೆ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸರು ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರುದ್ರೇಗೌಡ ತಿಳಿಸಿದರು.

ಸಮಾವೇಶದಲ್ಲಿ ಮುಖಂಡರು, ಶಕ್ತಿ, ಮಂಡಲದ ಪ್ರಮುಖರು, ಸ್ಥಳೀಯ ಸಂಸ್ಥೆ ಸದಸ್ಯರು, ಜನಪ್ರತಿನಿಧಿಗಳು ಭಾಗವಹಿಸುವರು ಸುಮಾರು ಒಂದೂವರೆ ಸಾವಿರ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸುವರು. ನಂತರ ಮಂಡಲದ ಸಭೆ ನಡೆಯಲಿದೆ. ಸಂಜೆ ಮಂಗಳೂರಿನತ್ತ ಪಯಣ ಬೆಳೆಸುವರು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಳಿನ್ ಕುಮಾರ್ ಕಟೀಲ್‌ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಸಂಘಟನೆ, ಅಭಿವೃದ್ದಿ ಕೆಲಸಗಳು, ವಿಶೇಷವಾಗಿ ಶಿವಮೊಗ್ಗ ಅಭಿವೃದ್ದಿಗೆ ಕುರಿತು ಕಾರ್ಯಕರ್ತರ ಜತೆ ಮಾತನಾಡುವರು. ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬುವರು ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಭದ್ರವಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಿಗೆ ನೆರವು, ಪರಿಹಾರ ನೀಡಲಾಗುತ್ತಿದೆ. ನೀರಾವರಿ, ವಿದ್ಯತ್, ರಸ್ತೆ, ಶಿಕ್ಷಣ ಮತ್ತಿತರ  ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯೂ ಚುರುಕುಗೊಂಡಿದೆ. ವಿಮಾನ ನಿಲ್ದಾಣ ಸ್ಥಾಪನೆ 6 ತಿಂಗಳಲ್ಲಿ ಸಾಕಾರಗೊಳ್ಳಲಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಸಮಯದಲ್ಲಿ ಚಾಲನೆ ನೀಡಲಾಗಿತ್ತು. ₨ 40 ಕೋಟಿ ಹಣ ಬಿಡುಗಡೆಯಾಗಿತ್ತು. ಈಗ ₨ 120 ಕೋಟಿ ಬಿಡುಗಡೆ ಮಾಡಲಾಗಿದೆ. ರೈಟ್ಸ್ ಕಂಪನಿಯವರಿಗೆ ತಾಂತ್ರಿಕ ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ತಕ್ಷಣ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ₨ 20 ಕೋಟಿ ವೆಚ್ಚದಲ್ಲಿ ಹಳೇ ಕಾರಾಗೃಹ ಆವರಣ ಅಭಿವೃದ್ಧಿ ಪಡಿಸಲಾಗುತ್ತಿದೆ. ಫ್ರೀಡಂ ಪಾರ್ಕ್‌ ಮಾದರಿಯಲ್ಲಿ ರೂಪಿಸಲಾಗುತ್ತಿದೆ ಎಂದು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ, ಬಿಜೆಪಿ ಮುಖಂಡರಾದ ಎಸ್.ಎನ್.ಚನ್ನಬಸಪ್ಪ, ಎನ್.ಜೆ.ರಾಜಶೇಖರ್, ಗಿರೀಶ್ ಪಟೇಲ್, ಶಂಕರ್, ಅನಿತಾ ರವಿಶಂಕರ್, ರುದ್ರೇಶ್, ರತ್ನಾಕರಶೆಣೈ, ಮಧುಸೂದನ್, ಕೆ.ವಿ.ಅಣ್ಣಪ್ಪ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು