ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ, ತಾ.ಪಂ ಚುನಾವಣೆ ಗೆಲುವಿಗೆ ಶ್ರಮಿಸಿ

ಪಕ್ಷದ ಮುಖಂಡರಿಗೆ ಸಚಿವ ವಿ.ಸುನೀಲ್ ಕುಮಾರ್ ಕರೆ
Last Updated 4 ಸೆಪ್ಟೆಂಬರ್ 2021, 4:00 IST
ಅಕ್ಷರ ಗಾತ್ರ

ಉಡುಪಿ: ಮಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುವ ನಿಟ್ಟಿನಲ್ಲಿ ಪ್ರತಿ ಮಹಾ ಶಕ್ತಿಕೇಂದ್ರದ ಬೂತ್ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಾವೇಶ ನಡೆಸಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಬಿಜೆಪಿ ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.

ಮಹಾ ಶಕ್ತಿಕೇಂದ್ರದ ಜೊತೆಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕುಕ ಪಂಚಾಯಿತಿ ಸದಸ್ಯರ ಹೊಂದಾಣಿಕೆ ಅಗತ್ಯ. ಮಹಾ ಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ವಿಧಾನಸಭಾ ಕ್ಷೇತ್ರವಾರು ಚುನಾವಣಾ ಪೂರ್ವಸಿದ್ಧತಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಬೂತ್ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯರನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಸೆ.30ರೊಳಗೆ ಎಲ್ಲ ಕ್ಷೇತ್ರಗಳಲ್ಲಿ ಸಮಾವೇಶ ಆಯೋಜಿಸಬೇಕು. ಪಕ್ಷ ಸಂಘಟನೆಯ ಜೊತೆಗೆ ಪರಿಣಾಮಕಾರಿ ಚುನಾವಣಾ ಕಾರ್ಯತಂತ್ರಗಳ ಮೂಲಕ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲು ಎಲ್ಲರೂ ಸಂಘಟಿತ ಶ್ರಮ ಹಾಕಬೇಕು ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಭಿವೃದ್ಧಿ ಪರವಾದ ಆಡಳಿತವಿದೆ. ಬಿಜೆಪಿ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಬೇಕು. ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಮೂವರು ಸಚಿವರಿದ್ದಾರೆ. ಸಂಘಟನೆಯ ಮೂಲಕ ಹಿಂದಿನ ಚುನಾವಣೆಗಳನ್ನು ಎದುರಿಸಿ ಯಶಸ್ಸು ಪಡೆದ ಅನುಭವ ಬೆನ್ನಿಗಿದೆ. ಸಂಘಟಿತ ಪ್ರಯತ್ನದಿಂದ ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವ ಸಾಧಿಸಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು ಎಂದರು ಕರೆ ನಿಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT