ಮಂಗಳವಾರ, ಫೆಬ್ರವರಿ 18, 2020
16 °C

ಮುಖ್ಯಮಂತ್ರಿಗೆ ಕಪ್ಪು ಬಾವುಟ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದ ಇಲ್ಲಿನ ಟಿಪ್ಪು ಸಹರಾ ಯುವಜನ ಸಂಘದ ಸದಸ್ಯರನ್ನು ಭಾನುವಾರ ಪೊಲೀಸರು ಅವರನ್ನು ಬಂಧಿಸಿದರು.

ಇಲ್ಲಿನ ನ್ಯೂ ಬಿ.ಎಚ್. ರಸ್ತೆಯ ರಿಲೆಯನ್ಸ್ ಪೆಟ್ರೋಲ್ ಬಂಕ್ ಬಳಿ ಟಿಪ್ಪು ಸಹರಾ ಸಂಘದ ಕಾರ್ಯಕರ್ತರು ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸಲು ತೆರೆಮರೆಯಲ್ಲಿ ಸಿದ್ಧರಾಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಮುಖ್ಯಮಂತ್ರಿ ವಾಹನ ಅಲ್ಲಿಗೆ ಬರುವ ಮುನ್ನವೇ ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

ಟಿಪ್ಪು ಸಹರಾ ಯುವಜನ ಸಂಘದ ಅಧ್ಯಕ್ಷ ಸೈಯದ್ ಜಮೀಲ್, ಮಹ್ಮದ್ ಗೌಸ್, ಮನ್ಸೂರ್ ಅಹ್ಮದ್, ಸಲೀಂ, ಅಸಾದುಲ್ಲಾಖಾನ್, ಇರ್ಷಾದ್, ಶಹಬ್ಬಾಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ದೂಗೂರು ಬಂಧನ: ನಗರದಲ್ಲಿ ಇಂದಿರಾ ಕ್ಯಾಂಟಿನ್ ಕಟ್ಟಡ ಸಿದ್ಧವಾಗಿದ್ದರೂ ಅದನ್ನು ಉದ್ಘಾಟನೆ ಮಾಡುವಲ್ಲಿ ವಿಳಂಬ ನೀತಿ ತೋರುತ್ತಿರುವುದನ್ನು ಖಂಡಿಸಿ ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೇಳಿಕೆ ನೀಡಿದ್ದ ದಲಿತ ಸಂಘರ್ಷ ಸಮಿತಿ ಮುಖಂಡ ಪರಮೇಶ್ವರ ದೂಗೂರು ಅವರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಭಾನುವಾರ ಬೆಳಿಗ್ಗೆಯೇ ಬಂಧಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)