ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಗತ್ತು ಗೆಲ್ಲಲು ಜ್ಞಾನ ಅಗತ್ಯ’

Last Updated 1 ಆಗಸ್ಟ್ 2019, 11:48 IST
ಅಕ್ಷರ ಗಾತ್ರ

ವಿಜಯಪುರ: ‘ಜ್ಞಾನ ಮತ್ತು ಪ್ರತಿಭೆ ಇದ್ದರೆ ಇಡೀ ಜಗತ್ತನ್ನೇ ಗೆಲ್ಲಬಹುದು. ಯುವಜನಾಂಗ ಜ್ಞಾನವನ್ನು ಬೆಳೆಸಿಕೊಂಡು, ತಾವು ಬೆಳೆಯುವ ಜತೆಗೆ ಸಮಾಜವನ್ನೂ ಬೆಳೆಸಬೇಕು’ ಎಂದು ಜಂಟಿ ನಿರ್ದೇಶಕಿ ಡಾ.ನೀಲಾಂಬಿಕಾ ಎಸ್.ಪಟ್ಟಣಶೆಟ್ಟಿ ಹೇಳಿದರು.

ನಗರದ ಬಿಎಲ್‌ಡಿಇ ಸಂಸ್ಥೆಯ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಈಚೆಗೆ ಆಯೋಜಿಸಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಕಷ್ಟು ಅವಕಾಶಗಳಿವೆ. ಅವಕಾಶಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿನಿಯರು ಬಾನೆತ್ತರಕ್ಕೆ ಬೆಳೆಯಬೇಕು. ಮಹಿಳೆಯರು ಪುರುಷರಿಗೆ ಸಮಾನವಾಗಿ ಬೆಳೆಯುವ ಜತೆಗೆ ತಮ್ಮಲ್ಲಿ ಹುದುಗಿರುವ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸಬೇಕು’ ಎಂದರು.

ಬಸವಲಿಂಗ ಸ್ವಾಮೀಜಿ ಮಾತನಾಡಿ, ‘ನಮಗೂ ಇತರರಿಗೂ ಸಂತೋಷವನ್ನು ನೀಡುವ ಸಾಧನೆ ಮಾಡಬೇಕು. ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಇವಳು ಸಂಸ್ಕೃತಿಯ ಪ್ರತೀಕ, ಸಾಕ್ಷಾತ್ ಶಾರದೆ. ದೇಶದ ಸಂಸ್ಕೃತಿಯನ್ನು ಹೆಚ್ಚಿಸುವಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ’ ಎಂದು ಹೇಳಿದರು.

ಪ್ರೊ.ಎಸ್.ಎಚ್.ಲಗಳಿ ಮಾತನಾಡಿ, ‘ಪರಿಶ್ರಮವಿದ್ದರೆ ಪ್ರತಿಫಲ ಖಂಡಿತ ದೊರೆಯುತ್ತದೆ. ವಿದ್ಯಾರ್ಥಿನಿಯರು ಸಾಂಸ್ಕೃತಿಕ, -ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು. ಕಾಲೇಜಿನ ಕೀರ್ತಿಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು’ ಎಂದು ಸಲಹೆ ನೀಡಿದರು.

ಪ್ರೊ.ಬಿ.ಬಿ.ಹಚಡದ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯರಾದ ಡಾ.ಎಸ್.ಜೆ.ಪವಾರ ಸ್ವಾಗತಿಸಿದರು. ಪ್ರೊ.ವಿ.ಎಸ್.ನಂದೀಶ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT