ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಕೆಲ ಶಾಲೆಗಳಿಗೆ ಬಾಂಬ್ ಬೆದರಿಕೆ

Last Updated 8 ಏಪ್ರಿಲ್ 2022, 8:59 IST
ಅಕ್ಷರ ಗಾತ್ರ

ಬೆಂಗಳೂರು: ಹೆಣ್ಣೂರು ಬಳಿಯ ವಿನ್ಸೆಂಟ್ ಪಲ್ಲೋಟಿ ಶಾಲೆ, ಎಬಿನೈಜರ್ ಇಂಟರ್‌ನ್ಯಾಷನಲ್ ಶಾಲೆ, ಇಂಡಿಯನ್ ಪಬ್ಲಿಕ್ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಶಾಲೆಗೆ ಭೇಟಿ ನೀಡಿರುವ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

‘ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಶಾಲೆಯ ಇ–ಮೇಲ್‌ ಐಡಿಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಿಬ್ಬಂದಿ ಸ್ಥಳದಲ್ಲಿದ್ದಾರೆ’ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿದರು.

‘ಶಾಲೆಯಲ್ಲಿ ಶಕ್ತಿಯುತವಾದ ಬಾಂಬ್‌ ಇರಿಸಲಾಗಿದೆ. ಇದು ಹಾಸ್ಯವಲ್ಲ. ಕೂಡಲೇ ಪೊಲೀಸರಿಗೆ ಕರೆ ಮಾಡಿ. ನೂರಾರು ಜೀವಗಳನ್ನು ಉಳಿಸಿಕೊಳ್ಳಿ. ಜೀವ ಉಳಿಸುವ ಜವಾಬ್ದಾರಿ ನಿಮ್ಮ ಕೈಯಲ್ಲಿದೆ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿದೆ’ ಎಂದೂ ತಿಳಿಸಿದರು. ‘ಪೊಲೀಸರು ತಪಾಸಣೆ ನಡೆಸುತ್ತಿದ್ದು, ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ’ ಎಂದೂ ಹೇಳಿದರು.

ಬೆದರಿಕೆ ಸಂದೇಶ
ಬೆದರಿಕೆ ಸಂದೇಶ

ತನಿಖೆಗೆ ತಂಡ ರಚನೆ: ‘ಬೆದರಿಕೆ ಸಂದೇಶ ಕಳುಹಿಸಿರುವ ಇ–ಮೇಲ್ ಐಡಿ ಆಧರಿಸಿ ತನಿಖೆ ಆರಂಭಿಸಲಾಗಿದೆ. ಇದನ್ನು ಕಳುಹಿಸಿದವರು ಯಾರು ಎಂಬುದನ್ನು ಪತ್ತೆ ಮಾಡಲು ವಿಶೇಷ ತಂಡ ರಚಿಸಲಾಗಿದೆ’ ಎಂದು ಕಮಲ್ ಪಂತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT