ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್ಐ, ಎಸ್‌ಡಿಪಿಐ ನಿಷೇಧ ನಿರ್ಧರಿಸಿಲ್ಲ: ಯಡಿಯೂರಪ್ಪ

Last Updated 29 ಜನವರಿ 2020, 14:31 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಶ್ರೀರಾಮುಲು, ರಮೇಶ್ ಜಾರಕಿಹೊಳಿ ಅವರನ್ನು ಉಪ ಮುಖ್ಯಮಂತ್ರಿ ಮಾಡುವ ಕುರಿತು ಚರ್ಚೆಯಾಗಿಲ್ಲ. ದೆಹಲಿಗೆ ತೆರಳಿ ಗುರುವಾರ ವರಿಷ್ಠರನ್ನು ಭೇಟಿ ಮಾಡುವೆ. ಶುಕ್ರವಾರ ವಾಸಪ್‌ ಬರುವೆ. ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಭರವಸೆ ನೀಡಿದರು.

ಫೆ.5ರಂದು ಬಜೆಟ್ ಮಂಡಿಸಲಾಗುವುದು. ಕೃಷಿ ಮತ್ತು ನೀರಾವರಿಗೆ ಆದ್ಯತೆ ನೀಡಲಾಗುತ್ತಿದೆ. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸುವುದಿಲ್ಲಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT