ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ; ಜನರಿಗೆ ತಕ್ಷಣ ಸ್ಪಂದಿಸಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ
Last Updated 5 ಆಗಸ್ಟ್ 2019, 15:32 IST
ಅಕ್ಷರ ಗಾತ್ರ

ವಿಜಯಪುರ: ‘ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಬಾಗಲಕೋಟೆ ಜಿಲ್ಲೆಯ ವಿವಿಧ ಗ್ರಾಮಗಳ ಜನರ ಸಂಕಷ್ಟಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಅತಿಥಿಗೃಹದ ಸಭಾಂಗಣ ದಲ್ಲಿ ಸೋಮವಾರ ಆಯೋಜಿಸಿದ್ದ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಮಖಂಡಿ ತಾಲ್ಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಗ್ರಾಮಗಳು ಹಾಗೂ ಸುರಕ್ಷತಾ ಸ್ಥಳಗಳಿಗೆ ವಿವಿಧ ಕುಟುಂಬಗಳ ಸ್ಥಳಾಂತರ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ‘ಅವಶ್ಯಕತೆ ಇರುವ ಕಡೆ ದೋಣಿ ವ್ಯವಸ್ಥೆ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ನೆರವು ನೀಡಬೇಕು’ ಎಂದು ಸಲಹೆ ನೀಡಿದರು.

‘ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಕೈಗೊಳ್ಳಲಾಗುತ್ತಿರುವ ಕೆರೆ ನೀರು ತುಂಬುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೆರೆಗಳನ್ನು ತುಂಬುವುದರಿಂದ ಅಂತರ್ಜಲ ಕುಸಿಯುವುದನ್ನು ತಡೆಯುವ ಜತೆಗೆ ಪ್ರವಾಹ ಪರಿಸ್ಥಿತಿ ನಿರ್ವಹಿಸಬಹುದಾಗಿದೆ. ಆದ್ಯತೆ ಮೇಲೆ ಈ ಯೋಜನೆ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಎಸ್.ಪಾಟೀಲ, ಯಶವಂತ ರಾಯಗೌಡ ಪಾಟೀಲ, ಎಂ.ಸಿ.ಮನಗೂಳಿ, ಮುರುಗೇಶ ನಿರಾಣಿ, ಬಸನಗೌಡ ಪಾಟೀಲ ಯತ್ನಾಳ, ಎ.ಎಸ್.ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಸೇರಿದಂತೆ ಬಾಗಲಕೋಟೆ ಜಿಲ್ಲೆಯ ಶಾಸಕರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಪ್ರವಾಹ ಪರಿಸ್ಥಿತಿ ನಿರ್ವಹಣೆ ಹಾಗೂ ಕೈಗೊಳ್ಳಬೇಕಾದ ಪರಿಹಾರ ಕುರಿತಂತೆ ಮುಖ್ಯಮಂತ್ರಿ ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ್, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ದೀಪಾ ಚೋಳನ್, ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ, ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ವೆಂಕಟರಾಮರೆಡ್ಡಿ ಪಾಟೀಲ, ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಬಾಗಲಕೋಟೆ ಜಿಲ್ಲಾಧಿಕಾರಿ ರಾಮಚಂದ್ರರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT